ಕಾಂಗ್ರೆಸ್‌ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ

ಬೆಂಗಳೂರು – ರಾಜ್ಯದಲ್ಲಿ ಹಿಂದೆಂದಿಗಿಂತಲೂ ಈಗ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬ ಸತ್ಯವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಫೆಬ್ರವರಿ 21 ರಂದು ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಇಲಾಖೆಯ ಹೊಸ ನೇಮಕಾತಿ ಆದೇಶಗಳ ವಿತರಣಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಮಾತನಾಡಿ, ‘ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂದು ಇರುವಷ್ಟು ಭ್ರಷ್ಟಾಚಾರ ಎಂದೂ ಇರಲಿಲ್ಲ. ಈಗ ನೇಮಕಾತಿ ಮತ್ತು ವರ್ಗಾವಣೆ ಮಾಡಿಸಿಕೊಳ್ಳಲು ದಲ್ಲಾಳಿಗಳು (ಏಜೆಂಟರು) ಸಕ್ರಿಯರಾಗಿದ್ದಾರೆ. ಪ್ರಭಾವಿ ವ್ಯಕ್ತಿಗಳ ಮೂಲಕ ಹಣ ನೀಡಿ ವರ್ಗಾವಣೆ ಮಾಡಿಸಿಕೊಳ್ಳುವ ಪದ್ಧತಿ ಹೆಚ್ಚಾಗುತ್ತಿದೆ’ ಎಂದು ಹೇಳಿದರು. ಭ್ರಷ್ಟಾಚಾರಕ್ಕೆ ಕಡಿವಾಣಾ ಹಾಕಲು ವರ್ಗಾವಣೆ ಮತ್ತು ನೇಮಕಾತಿಯಲ್ಲಿ ಕೌನ್ಸಿಲಿಂಗ್ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. (ಎಲ್ಲಾ ಸರಕಾರಿ ಯಂತ್ರಗಳನ್ನು ಕೈಯಲ್ಲಿ ಹೊಂದಿರುವ ಮುಖ್ಯಮಂತ್ರಿಗಳು ಭ್ರಷ್ಟಾಚಾರವನ್ನು ತೊಡೆದುಹಾಕಲು ಕಠಿಣ ಕ್ರಮ ಕೈಗೊಳ್ಳುವ ಬದಲು ಕೌನ್ಸಿಲಿಂಗ್‌ನಂತಹ ಮೇಲ್ನೋಟದ ಕ್ರಮಗಳನ್ನು ಮಾಡುವುದು ಹಾಸ್ಯಾಸ್ಪದವಲ್ಲವೇ? – ಸಂಪಾದಕರು)
ಆರೋಗ್ಯ ಇಲಾಖೆಯ 5 ಸಾವಿರದ 700 ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳಿಗೆ ನೀಡಲಾಯಿತು. ಯಾರೂ ವರ್ಗಾವಣೆಗಾಗಿ ಶಿಫಾರಸು ಮಾಡಲು ದಲ್ಲಾಳಿಗಳ ಬಳಿ ಹೋಗಬೇಡಿ ಎಂದು ಮುಖ್ಯಮಂತ್ರಿಗಳು ಅಭ್ಯರ್ಥಿಗಳಿಗೆ ಸಲಹೆ ನೀಡಿದರು. ಅಲ್ಲದೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2 ಲಕ್ಷದ 50 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು. (ಇಷ್ಟು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳನ್ನು ಖಾಲಿ ಇಟ್ಟಿರುವುದು ಸರಕಾರಕ್ಕೆ ನಾಚಿಕೆಗೇಡಿನ ಸಂಗತಿ! – ಸಂಪಾದಕರು) ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಂಪಾದಕೀಯ ನಿಲುವುಕಲ್ಪನೆಗೂ ನಿಲುಕದ ಮಟ್ಟಕ್ಕೆ ಹೋಗಿರುವ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಆದ್ದರಿಂದ ಅವರು ಮುಂದಿನ ಒಂದು ವರ್ಷದಲ್ಲಿ ಎಲ್ಲಾ ಭ್ರಷ್ಟಾಚಾರವನ್ನು ಕಿತ್ತೊಗೆಯಬೇಕು, ಇಲ್ಲದಿದ್ದರೆ ರಾಜೀನಾಮೆ ನೀಡಬೇಕು ಎಂದು ರಾಷ್ಟ್ರಪ್ರೇಮಿಗಳು ಬಯಸುತ್ತಾರೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!