
(ಎನ್.ಸಿ.ಇ.ಆರ್.ಟಿ. ಎಂದರೆ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ)
ನವದೆಹಲಿ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು ೮ ನೇ ತರಗತಿಯ ಹೊಸ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಒಂದು ಪಾಠವನ್ನು ಸೇರಿಸಿದೆ. ಈ ಹಿಂದೆ ಇದ್ದ ಪಾಠದಲ್ಲಿ ನ್ಯಾಯಾಲಯದ ರಚನೆ ಮತ್ತು ಪಾತ್ರದ ಮೇಲೆ ಹೆಚ್ಚು ಗಮನ ಹರಿಸಲಾಗಿತ್ತು. ಹೊಸ ಪಾಠದ ಹೆಸರು ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂದಾಗಿದೆ. ಈ ಅಧ್ಯಾಯದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ೮೧,೦೦೦, ಉಚ್ಚ ನ್ಯಾಯಾಲಯಗಳಲ್ಲಿ ೬೨ ಲಕ್ಷ ೪೦ ಸಾವಿರ ಹಾಗೂ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ೪ ಕೋಟಿ ೭೦ ಲಕ್ಷ ಪ್ರಕರಣಗಳು ಬಾಕಿ ಇರುವ ಸಂಖ್ಯೆಯನ್ನು ಕೂಡ ಉಲ್ಲೇಖಿಸಲಾಗಿದೆ.
ಹೊಸ ಪಾಠದಲ್ಲಿ ಯಾವ ಮಾಹಿತಿಯಿದೆ?
ನ್ಯಾಯಾಧೀಶರು ಕಟ್ಟುನಿಟ್ಟಾದ ನೀತಿಸಂಹಿತೆಗೆ ಬದ್ಧರಾಗಿರುತ್ತಾರೆ, ಇದು ಕೇವಲ ನ್ಯಾಯಾಲಯದಲ್ಲಿ ಮಾತ್ರವಲ್ಲದೆ ನ್ಯಾಯಾಲಯದ ಹೊರಗೂ ಅವರ ನಡವಳಿಕೆಯನ್ನು ನಿಯಂತ್ರಿಸುತ್ತದೆ ಎಂದು ಈ ಪಾಠದಲ್ಲಿ ಹೇಳಲಾಗಿದೆ. ಗಂಭೀರ ಪ್ರಕರಣಗಳಲ್ಲಿ ನ್ಯಾಯಾಧೀಶರನ್ನು ಹುದ್ದೆಯಿಂದ ತೆಗೆದುಹಾಕುವ ಸಾಂವಿಧಾನಿಕ ನಿಬಂಧನೆಯ ಬಗ್ಗೆಯೂ ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಸಂಸತ್ತು ಮಹಾಭಿಯೋಗ ಪ್ರಸ್ತಾವನೆಯನ್ನು ಅಂಗೀಕರಿಸುವ ಮೂಲಕ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬಹುದೆಂಬ ಮಾಹಿತಿಯನ್ನು ಪುಸ್ತಕದಲ್ಲಿ ನೀಡಲಾಗಿದೆ.
ಈ ಅಧ್ಯಾಯದಲ್ಲಿ, ‘ಜನರು ನ್ಯಾಯಾಂಗದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವನ್ನು ಎದುರಿಸುತ್ತಾರೆ. ಬಡವರು ಮತ್ತು ಅಗತ್ಯವಿರುವವರಿಗೆ ನ್ಯಾಯ ಪಡೆಯುವ ಪ್ರಕ್ರಿಯೆಯಲ್ಲಿ ತೊಂದರೆಗಳು ಉಂಟಾಗಬಹುದು’ ಎಂದು ಬರೆಯಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಆಡಳಿತದಲ್ಲಿ ಪಾರದರ್ಶಕತೆ ತಂದು ಸಾರ್ವಜನಿಕ ವಿಶ್ವಾಸವನ್ನು ಬಲಪಡಿಸಲು ಪ್ರಯತ್ನಿಸುತ್ತಿವೆ. ತಂತ್ರಜ್ಞಾನದ ಬಳಕೆ ಮತ್ತು ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವ ಕ್ರಮಗಳನ್ನೂ ಸಹ ಸೇರಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ