
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಅಧಿಕಾರ ಬದಲಾವಣೆಯ ನಂತರ ಮಹಮ್ಮದ್ ಯೂನಸ್ ಪದಚ್ಯುತರಾಗಿ ತಾರಿಕ್ ರೆಹಮಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೂ ದೇಶದ ಹಿಂದೂ ಅಲ್ಪಸಂಖ್ಯಾತರ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಹಿಂದೂಗಳ ವಿರುದ್ಧದ ಹಿಂಸಾಚಾರ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಚಾಂದನಿಪುರದಲ್ಲಿ ದಿವ್ಯಾಂಗ (ವಿಕಲಚೇತನ) ಹಿಂದೂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ ರಕೀಬ್, ಸೊಹೇಲ್ ಮತ್ತು ರಸೆಲ್ ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಗಾಯಕ್‌ಬಾಂಧಾದಲ್ಲಿ ಹಿಂದೂ ನ್ಯಾಯವಾದಿಯೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆಯೂ ನಡೆದಿದೆ.
1. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 25 ವರ್ಷದ ಸಂತ್ರಸ್ತ ಹಿಂದೂ ಮಹಿಳೆ ನೀಡಿದ ಮಾಹಿತಿಯಂತೆ, ಫೆಬ್ರವರಿ 22 ರಂದು ರಾತ್ರಿ 9 ಗಂಟೆ ಸುಮಾರಿಗೆ ಕೀರ್ತನೆ ಮುಗಿಸಿ ಹಿಂದಿರುಗುತ್ತಿದ್ದಾಗ ಮೂವರು ಮುಸ್ಲಿಂ ಯುವಕರು ಆಕೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ; ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.
2. ಗಾಯಕ್‌ಬಾಂಧಾದಲ್ಲಿ 40 ವರ್ಷದ ಹಿಂದೂ ನ್ಯಾಯವಾದಿ ಅಮಿತಾಭ ಚಂದ್ರ ಸುಜನ ಅವರನ್ನು ಮುಸ್ಲಿಂ ದುಷ್ಕರ್ಮಿಗಳು ಅವರ ನಿವಾಸಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ‘ಬಿ.ಎನ್.ಪಿ.’ ಪಕ್ಷದ ಜಯಭೇರಿಯ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯ ನಂತರ ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಸಂಪಾದಕೀಯ ನಿಲುವುಚುನಾವಣೆ ಮತ್ತು ಫಲಿತಾಂಶಗಳು ಪ್ರಕಟವಾದ ನಂತರವೂ ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಗಳು ನಡೆಯುತ್ತಲೇ ಇವೆ. ಆದ್ದರಿಂದ ‘ಹಿಂದೂಗಳ ಹತ್ಯೆಗಳು ಕೇವಲ ರಾಜಕೀಯ ಹತ್ಯೆಗಳು’ ಎಂದು ದಾವೆ ಮಾಡುವ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ಈಗ ಈ ಬಗ್ಗೆ ಉತ್ತರಿಸುವಂತೆ ಒತ್ತಾಯಿಸಬೇಕು. ಭಾರತದ ವಿದೇಶಾಂಗ ಸಚಿವಾಲಯವು ಬಾಂಗ್ಲಾದೇಶ ಸರಕಾರವನ್ನು ಈಗಲಾದರೂ ತರಾಟೆಗೆ ತೆಗೆದುಕೊಳ್ಳಬೇಕು ಎಂದು ಭಾರತದ ಹಿಂದೂಗಳು ಬಯಸುತ್ತಾರೆ! |
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim