‘ರಾಜ್ಯದಲ್ಲಿ ಉರ್ದು ಮಾತನಾಡುವವರಿಲ್ಲವೇ ?’ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು – ರಾಜ್ಯದ ಅಧಿಕೃತ ರಾಜ್ಯಭಾಷೆಯಾದ ಕನ್ನಡವನ್ನು ಕಡೆಗಣಿಸಿ ಕಾಂಗ್ರೆಸ್ ಸರಕಾರವು ಅಧಿಕೃತ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಪ್ರಕಟಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉರ್ದುವಿನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಿರುವ ಬಗ್ಗೆ ಪ್ರಶ್ನಿಸಿದಾಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅತ್ಯಂತ ಉದ್ಧಟತನದಿಂದ ಉತ್ತರಿಸುತ್ತಾ, ‘ರಾಜ್ಯದಲ್ಲಿ ಉರ್ದು ಮಾತನಾಡುವವರಿಲ್ಲವೇ?’ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ‘ಹಿಮೋಫಿಲಿಯಾ’ ರೋಗಿಗಳ ಚಿಕಿತ್ಸೆ ಮತ್ತು ‘108’ ಅಂಬ್ಯುಲೆನ್ಸ್ ಸೇವೆಯ ಲೋಕಾರ್ಪಣೆ ಸಮಾರಂಭವನ್ನು ನೆಹರು ತಾರಾಲಯದಲ್ಲಿ ಆಯೋಜಿಸಿದೆ. ಈ ಪ್ರಮುಖ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಕೇವಲ ಉರ್ದುವಿನಲ್ಲಿ ಮುದ್ರಿಸಲಾಗಿದೆ. ಇದರಿಂದಾಗಿ ಕನ್ನಡ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಸರಕಾರದ ವಿರುದ್ಧ ವೀbase ವಾಗಿ ಟೀಕಿಸಿವೆ. ‘ಸರಕಾರ ತನ್ನ ಅಧಿಕೃತ ಭಾಷೆಯನ್ನು ಮರೆತಿದೆಯೇ?’, ‘ಒಂದು ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಈ ರಾಜಕಾರಣ ಮಾಡಲಾಗುತ್ತಿದೆಯೇ?’, ಎಂಬ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ರಾಜ್ಯ ಅಧಿಕೃತ ಭಾಷಾ ನಿಯಮವೇನು ಹೇಳುತ್ತದೆ?
ರಾಜ್ಯ ಅಧಿಕೃತ ಭಾಷಾ ಕಾಯ್ದೆಯ ಪ್ರಕಾರ ಸರಕಾರಿ ಆಹ್ವಾನ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಕಟಿಸುವುದು ಶಿಷ್ಟಾಚಾರವಾಗಿದೆ; ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ನಿಯಮವನ್ನು ಬಹಿರಂಗವಾಗಿ ಉಲ್ಲಂಘಿಸಿರುವುದು ಕಂಡುಬರುತ್ತಿದೆ.
ಸಂಪಾದಕೀಯ ನಿಲುವುರಾಜ್ಯಭಾಷೆಯಲ್ಲಿ ಆಹ್ವಾನ ಪತ್ರಿಕೆ ತಯಾರಿಸುವ ನಿಯಮವಿದ್ದರೂ ಅದನ್ನು ಉಲ್ಲಂಘಿಸಿ ಮುಸಲ್ಮಾನರ ಓಲೈಕೆಗಾಗಿ ಉರ್ದುವಿನಲ್ಲಿ ತಯಾರಿಸಲು ಪ್ರಯತ್ನಿಸುವುದು, ಕಾಂಗ್ರೆಸ್ ಮಾಡಿದ ಈ ಕೃತ್ಯ ಆಶ್ಚರ್ಯಕರವೇನಲ್ಲ; ಏಕೆಂದರೆ ಕಾಂಗ್ರೆಸ್ ಸರಕಾರ ಎಂದರೆ ಪಾಕಿಸ್ತಾನಿ ಆಡಳಿತವೇ ಸರಿ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ