|

ತಿರುವನಂತಪುರಂ (ಕೇರಳ) – ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗುವ ಸರಕಾರಿ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳಿಗೆ ಇನ್ಮುಂದೆ ಧರ್ಮದ ಆಧಾರದ ಮೇಲೆ ಹೆಸರಿಡುವುದಿಲ್ಲ ಎಂದು ಕೇರಳ ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಬಿಡುಗಡೆ ಮಾಡಲಾದ ಅಧಿಕೃತ ಮನವಿಯಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.
ಸರಕಾರಿ ಮೂಲಗಳ ಮಾಹಿತಿಯ ಪ್ರಕಾರ, ‘ಸರಕಾರಿ ಶೈಕ್ಷಣಿಕ ಸಂಸ್ಥೆಗಳು ಜಾತ್ಯತೀತವಾಗಿರಬೇಕು’ ಮತ್ತು ‘ಸಂವಿಧಾನದ ಸಮಾನತೆ ಹಾಗೂ ಒಳಗೊಳ್ಳುವಿಕೆಯ ಮೌಲ್ಯಗಳು ಅದರಲ್ಲಿ ಪ್ರತಿಫಲಿಸಬೇಕು’ ಎಂಬುದು ಈ ನಿರ್ಧಾರದ ಹಿಂದಿನ ಉದ್ದೇಶವಾಗಿದೆ. ಈ ನಿರ್ಧಾರವು ಕೇವಲ ಮುಂದೆ ಸ್ಥಾಪನೆಯಾಗುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ ಸರಕಾರಿ ಶಾಲೆಗಳು, ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳ ಹೆಸರುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗದ ವರದಿಗೆ ಸಮ್ಮತಿ!
ರಾಜ್ಯ ಸಚಿವ ಸಂಪುಟವು ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗದ ವರದಿಗೆ ತಾತ್ವಿಕವಾಗಿ ಸಮ್ಮತಿ ನೀಡಿದ್ದು, ಅದನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ. ಕೇರಳಮ್‌ನ ಕ್ರೈಸ್ತ ಅಲ್ಪಸಂಖ್ಯಾತರ ಶಿಕ್ಷಣ, ಆರ್ಥಿಕ ಹಿಂದುಳಿದಿರುವಿಕೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧ್ಯಯನ ಮಾಡಲು ಈ ಆಯೋಗವನ್ನು ನೇಮಿಸಲಾಗಿತ್ತು. (ಕೇವಲ ಕ್ರೈಸ್ತರ ಕಲ್ಯಾಣದ ಬಗ್ಗೆ ಯೋಚಿಸುವ ಕೇರಳಮ್‌ನ ಕಮ್ಯುನಿಸ್ಟ್ ಆಡಳಿತಗಾರರು ಇತರ ಸಮುದಾಯಗಳ ಕಲ್ಯಾಣದ ಬಗ್ಗೆ ಎಂದಾದರೂ ಯೋಚಿಸಿದ್ದಾರೆಯೇ? – ಸಂಪಾದಕರು)
ಸಂಪಾದಕೀಯ ನಿಲುವುಕ್ರೈಸ್ತರ ಕಾನ್ವೆಂಟ್ ಶಾಲೆಗಳಲ್ಲಿ ಹಿಂದೂ ಮಕ್ಕಳ ಪ್ರತ್ಯಕ್ಷ ಅಥವಾ ವೈಚಾರಿಕ ಮತಾಂತರ ಮಾಡಲಾಗುತ್ತದೆ. ಇಂತಹ ಅನೇಕ ಘಟನೆಗಳು ಎಲ್ಲೆಡೆಯಿಂದ ವರದಿಯಾಗುತ್ತಲೇ ಇವೆ. ಹೀಗಿರುವಾಗ, ಜಾತ್ಯತೀತತೆಯ ಮೇಲೆ ನಿಜವಾದ ಕಾಳಜಿ ಇದ್ದರೆ, ಇಂತಹ ಕಾನ್ವೆಂಟ್ ಶಾಲೆಗಳ ಮೇಲೆ ಕಮ್ಯುನಿಸ್ಟ್ ಸರಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”