|

ಮಂಗಳೂರು – ಹುಡುಗಿಯೊಬ್ಬಳ ಜೊತೆ ಮಾತನಾಡಿದ್ದಕ್ಕಾಗಿ ಅಪ್ರಾಪ್ತ ಹಿಂದೂ ಬಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್ ಎಂಬುವವರನ್ನು ಇತ್ತೀಚೆಗೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಗುಡ್ಡೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ಅಪ್ರಾಪ್ತ ಹಿಂದೂ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂತ್ರಸ್ತ ಬಾಲಕನ ತಂದೆ ತಮ್ಮ ದೂರಿನಲ್ಲಿ, ಫೆಬ್ರವರಿ ೨೩ ರಂದು ಸಂಜೆ ೪ ಗಂಟೆಗೆ ಶಾಲೆ ಮುಗಿದ ನಂತರ ಬಾಬುಗುಡ್ಡೆಯಲ್ಲಿ ರೈಲ್ವೆ ಹಳಿ ಸಮೀಪ ೯ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನು ೧೦ ನೇ ತರಗತಿಯ ಹುಡುಗಿಯೊಂದಿಗೆ ಮಾತನಾಡುತ್ತಿದ್ದನು. ಆ ಸಮಯದಲ್ಲಿ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಮಗ ಅವಿಲ್, ಸಾರ್ವಜನಿಕ ಸ್ಥಳದಲ್ಲಿ ಪ್ರೇಮ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಬ್ಬರಿಗೂ ಬೆದರಿಕೆ ಹಾಕಿದ್ದಾರೆ. ಮೊಂತೇರೋ ಮತ್ತು ಆತನ ಮಗ ಅವರಿಬ್ಬರ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದಾರೆ. ಅವರು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ಅವಮಾನಕರವಾಗಿ ಜಾತಿ ನಿಂದನೆ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!