
ಚಂಡೀಗಢ – ಇಲ್ಲಿನ ಶಾಲೆಗಳನ್ನು ಬಾಂಬ್‌ನಿಂದ ಉಡಾಯಿಸುವ ಇ-ಮೇಲ್ ಬೆದರಿಕೆಗಳ ಸರಣಿ ಮತ್ತೆ ಆರಂಭವಾಗಿದೆ. ನಗರದ ವಿವೇಕ್ ಹೈಸ್ಕೂಲ್, ಗುರುಕುಲ ಭವನ ವಿದ್ಯಾಲಯ ಮತ್ತು ಇತರ ಅನೇಕ ಖಾಸಗಿ ಹಾಗೂ ಸರಕಾರಿ ಶಾಲೆಗಳಿಗೆ ಇಂತಹ ಇ-ಮೇಲ್‌ಗಳು ಬಂದಿವೆ. ಶಾಲಾ ಆಡಳಿತ ಮಂಡಳಿಯು ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂದಿನ 2 ದಿನಗಳಲ್ಲಿ ಇಡೀ ಚಂಡೀಗಢದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಲಿವೆ ಎಂದು ಬೆದರಿಕೆಯಲ್ಲಿ ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಈ ಇ-ಮೇಲ್‌ನಲ್ಲಿ ಪಂಜಾಬ್ ಸಚಿವಾಲಯವನ್ನು ಉಡಾಯಿಸುವ ಬೆದರಿಕೆಯೂ ಸೇರಿತ್ತು.
ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾವಲು ಹೆಚ್ಚಿಸಲಾಗಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಯಾವ ಇ-ಮೇಲ್ ವಿಳಾಸದಿಂದ ಬೆದರಿಕೆ ಹಾಕಲಾಗಿದೆಯೋ, ಆ ವಿಳಾಸವನ್ನು ಪರಿಶೀಲಿಸಲಾಗುತ್ತಿದೆ. ಪೋಷಕರು ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಸಂಶಯಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram