ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆತ; ಪೊಲೀಸರನ್ನೇ ಕಚ್ಚಿದ ಪ್ರತಿಭಟನಾಕಾರರು

(ಯುಜಿಸಿ ಎಂದರೆ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ – ವಿಶ್ವವಿದ್ಯಾಲಯ ಅನುದಾನ ಆಯೋಗ)
ನವದೆಹಲಿ – ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು), ಫೆಬ್ರವರಿ 26ರ ರಾತ್ರಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಯು ಮೆರವಣಿಗೆ ನಡೆಸಿತು. ಈ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ದೆಹಲಿ ಪೊಲೀಸರ ಮೇಲೆ ಕಲ್ಲು ಮತ್ತು ಬೂಟುಗಳನ್ನು ಎಸೆದಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸರನ್ನು ಕಚ್ಚಿದ ಘಟನೆಯೂ ನಡೆದಿದೆ. ಇದರಿಂದಾಗಿ ಹಲವಾರು ಪೊಲೀಸರು ಗಾಯಗೊಂಡಿದ್ದು, ನಂತರ ಪೊಲೀಸರು ಅನೇಕ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು.
Violence at JNU over demand to implement UGC rules 🚨
Stones & slippers hurled at police, an officer reportedly bitten during the chaos.
While the Supreme Court has stayed the new UGC regulations, those demanding their implementation are essentially committing contempt of… pic.twitter.com/iFzWKDruCp
— Sanatan Prabhat (@SanatanPrabhat) February 27, 2026
1. ವಿದ್ಯಾರ್ಥಿಗಳ ಈ ಮೆರವಣಿಗೆಯು ಶಿಕ್ಷಣ ಸಚಿವಾಲಯದವರೆಗೆ ಸಾಗಬೇಕಿತ್ತು; ಆದರೆ ಪೊಲೀಸರು ಅದನ್ನು ಮಧ್ಯದಲ್ಲೇ ತಡೆದರು. ಮೆರವಣಿಗೆಯನ್ನು ತಡೆದ ನಂತರ ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಆವರಣದಿಂದ ಹೊರಬರಲು ಪ್ರಯತ್ನಿಸಿದಾಗ, ವಿಶ್ವವಿದ್ಯಾಲಯದ ಪ್ರವೇಶ ದ್ವಾರದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆಯಿತು. ಈ ವೇಳೆ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಅದಿತಿ ಮಿಶ್ರಾ, ಮಾಜಿ ಅಧ್ಯಕ್ಷ ನಿತೀಶ್ ಕುಮಾರ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಯಿತು.
2. ಪೊಲೀಸರು ತಮ್ಮ ಮೇಲೆ ಅತಿಯಾದ ಬಲ ಪ್ರಯೋಗ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಸಂಘರ್ಷದಲ್ಲಿ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಕೆಲವರನ್ನು ಪೊಲೀಸರು ಅಪರಿಚಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.
3. ಈ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯವು, “ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕೆಂಬ ಬೇಡಿಕೆಯು ಸುಪ್ರೀಂ ಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದೆ. ನ್ಯಾಯಾಲಯವು ಈಗಾಗಲೇ ಈ ನಿಯಮಗಳಿಗೆ ತಡೆ ನೀಡಿದೆ. ಈ ನಿಯಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಯಾವುದೇ ಅಧಿಕಾರ ವಿಶ್ವವಿದ್ಯಾಲಯದ ಕುಲಪತಿಗಳಿಗಾಗಲಿ ಅಥವಾ ಕುಲಸಚಿವರಿಗಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದೆ.
ಸಂಪಾದಕೀಯ ನಿಲುವು
|
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ