|

ದರ್ಭಂಗಾ(ಬಿಹಾರ): ದರ್ಭಂಗಾ ಜಿಲ್ಲೆಯಲ್ಲಿ ‘ಲವ್ ಜಿಹಾದ್’ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾಮತೌಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಖ್ಯಾತ ಅಪರಾಧಿ ಮಹಮ್ಮದ್ ಸಿತಾರಾ ನದಾಫ್ ಎಂಬಾತ ಹಿಂದೂ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮತಾಂತರ ಮಾಡಿದ್ದಾನೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ನೀಡಿದ್ದ ಶರಣಾಗತಿಯ ಗಡುವು ಮುಗಿದ ಕಾರಣ ಆತನ ಮನೆ ಮತ್ತು ಸೊತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಂತ್ರಸ್ತ ಬಾಲಕಿಯ ಕುಟುಂಬದವರು ಇದೊಂದು ‘ಲವ್ ಜಿಹಾದ್’ ಪ್ರಕರಣ ಎಂದು ಆರೋಪಿಸಿದ್ದಾರೆ. ಮಹಮ್ಮದ್ ನದಾಫ್ ವಿವಾಹಿತನಾಗಿದ್ದು, ಇಬ್ಬರು ಮಕ್ಕಳ ತಂದೆಯಾಗಿದ್ದಾನೆ. ಈ ಹಿಂದೆಯೂ ಆತ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಮಹಮ್ಮದ್ ಚಮನ್, ಮಹಮ್ಮದ್ ಅನ್ವರ್, ಮಹಮ್ಮದ್ ಜಮಹೀರ್ ನದಾಫ್ ಮತ್ತು ಜಮೀಲಾ ಖಾತೂನ್ ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಸ್ತುತ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದು, ಡಿಎಸ್‌ಪಿ ಶುಭೇಂದ್ರ ಕುಮಾರ್ ಸುಮನ್ ಅವರು ಆರೋಪಿಗಳ ಬಂಧನಕ್ಕಾಗಿ ನಿರಂತರವಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!