ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ‘ಲವ್ ಜಿಹಾದ್’ ವಿರೋಧಿ ಕಾಯ್ದೆ ಜಾರಿಯಾಗುವ ಸಾಧ್ಯತೆ !

ವಿಶೇಷ ಸಮಿತಿಯಿಂದ ಕಾಯ್ದೆಯ ಕರಡು ವಿಧಿ ನ್ಯಾಯ ಇಲಾಖೆಗೆ ರವಾನೆ !

ಮುಂಬಯಿ – ಮಹಾರಾಷ್ಟ್ರದಲ್ಲಿ ‘ಲವ್ ಜಿಹಾದ್’ ವಿರೋಧಿ ಕಾಯ್ದೆ ಜಾರಿಗೆ ತರಲು ವಿಶೇಷ ಸಮಿತಿಯ ಸಭೆಗಳಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಮಿತಿಯು ಸಿದ್ಧಪಡಿಸಿದ ಕರಡನ್ನು ವಿಧಿ ನ್ಯಾಯ ಇಲಾಖೆಗೆ ಕಳುಹಿಸಿಕೊಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯ ಸಭೆಗಳು ನಡೆದವು. ಈ ಉನ್ನತ ಮಟ್ಟದ ಸಮಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ವಿಧಿ ಮತ್ತು ನ್ಯಾಯ ಇಲಾಖೆ, ಹಾಗೆಯೇ ಸಾಮಾಜಿಕ ನ್ಯಾಯ ಮತ್ತು ಗೃಹ ಇಲಾಖೆಯ ಕಾರ್ಯದರ್ಶಿಗಳು ಒಳಗೊಂಡಿದ್ದಾರೆ. ಭಿಗವಣ್ ಪ್ರದೇಶದ ಹಿಂದೂ ಯುವತಿಯ ಅಪಹರಣದ ಘಟನೆಯ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಶೀಘ್ರವಾಗಿ ತರಲು ಪ್ರಯತ್ನಗಳು ನಡೆಯುತ್ತಿವೆ.

ದೇಶದಲ್ಲಿ ಈ ಹಿಂದೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ, ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಲವ್ ಜಿಹಾದ್ ಮತ್ತು ಮತಾಂತರ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಎಲ್ಲಾ ರಾಜ್ಯಗಳ ಕಾಯ್ದೆಗಳನ್ನು ಉನ್ನತ ಮಟ್ಟದ ಸಮಿತಿಯು ಕೂಲಂಕಷವಾಗಿ ಅಧ್ಯಯನ ಮಾಡಿದೆ.