ಕೊಡಗಿಲ್ಲಿ ರಾ.ಸ್ವ. ಸಂಘದ ಕಾರ್ಯಕರ್ತರ ಮೇಲೆ ಮತಾಂಧ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ

  • ಕಾಂಗ್ರೆಸ್ ನಾಯಕನ ಮಗ ಭಾಗಿ ಎಂದು ಆರೋಪ

  • ಹಿಂದೂ ಸಂಘಟನೆಗಳಿಂದ ಪೊಲೀಸ್ ಠಾಣೆಯ ಮುಂದೆ ಧರಣಿ ಸತ್ಯಾಗ್ರಹ

ಕೊಡಗು – ಶಿವಮೊಗ್ಗದಲ್ಲಿ ಅಪ್ರಾಪ್ತ ಹಿಂದೂ ಅಪ್ರಾಪ್ತನ ಭೀಕರ ಹತ್ಯೆಯ ಘಟನೆಯ ಬೆನ್ನಲ್ಲೇ, ಈಗ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಆಯೋಜಿಸಲಾದ ‘ಹಿಂದೂ ಸಂಗಮ’ ಕಾರ್ಯಕ್ರಮದ ಪ್ರಚಾರಕ್ಕೆ ತೆರಳಿದ್ದ ರಾ.ಸ್ವ. ಸಂಘದ ಕಾರ್ಯಕರ್ತ ಗೌತಮ್ ಎಂಬುವವರ ಮೇಲೆ ಮುಸ್ಲಿಮರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯಿಂದ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಹಲ್ಲೆಯಲ್ಲಿ ನಾಪೋಕ್ಲು ಭಾಗದ ಕಾಂಗ್ರೆಸ್‌ನ ಪ್ರಭಾವಿ ನಾಯಕನ ಮಗ ಭಾಗಿಯಾಗಿದ್ದಾನೆ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಈ ಹಲ್ಲೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ನಾಪೋಕ್ಲು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ನಡೆಸಿದ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ನಾಪೋಕ್ಲು ಪೊಲೀಸ್ ಠಾಣೆಯ ಮುಂದೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ‘ಎಲ್ಲಿಯವರೆಗೆ ಎಲ್ಲಾ ಆರೋಪಿಗಳನ್ನು ಬಂಧಿಸುವುದಿಲ್ಲವೋ, ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ’ ಎಂಬ ನಿಲುವನ್ನು ಹಿಂದೂ ಕಾರ್ಯಕರ್ತರು ತಳೆದಿದ್ದಾರೆ.

ಸಂಪಾದಕೀಯ ನಿಲುವು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧರಿಗೆ ಮುಕ್ತ ಅವಕಾಶ ಸಿಕ್ಕಂತಾಗಿದ್ದು, ಅವರು ಇಂತಹ ಹಲ್ಲೆಗಳನ್ನು ಮಾಡುವ ಧೈರ್ಯ ಮಾಡುತ್ತಿದ್ದಾರೆ!