
ವಾಷಿಂಗ್ಟನ್ ಡಿಸಿ (ಅಮೆರಿಕ) – ಅಫಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಎರಡೂ ದೇಶಗಳು ಪರಸ್ಪರರ ಸೈನಿಕರನ್ನು ಕೊಂದಿರುವುದಾಗಿ ದಾವೆ ಮಾಡುತ್ತಿವೆ. ಪಾಕಿಸ್ತಾನವು ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾ ಪ್ರದೇಶಗಳಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫಘಾನಿಸ್ತಾನದ 270 ಕ್ಕೂ ಹೆಚ್ಚು ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡರೆ, ಅಫಘಾನಿಸ್ತಾನವು ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ 70 ಸೈನಿಕರನ್ನು ಕೊಲ್ಲಲಾಗಿದೆ ಎಂದು ದಾವೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ಧ ನಿಲ್ಲಿಸುವ ಬದಲು ತಾಲಿಬಾನ್ ಮೇಲಿನ ದಾಳಿಗಾಗಿ ಪಾಕಿಸ್ತಾನವನ್ನು ಬೆಂಬಲಿಸಿದ್ದಾರೆ.
ಪಾಕ್ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರೊಂದಿಗೆ ನನ್ನ ಸಂಬಂಧ ಚೆನ್ನಾಗಿದೆ! – ಟ್ರಂಪ್
ಪಾಕಿಸ್ತಾನ ಮತ್ತು ಅಫಘಾನಿಸ್ತಾನ ನಡುವಿನ ಯುದ್ಧದ ಬಗ್ಗೆ ಪಾಕಿಸ್ತಾನಿ ಪತ್ರಕರ್ತರೊಬ್ಬರು ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಅವರಿಗೆ ಪ್ರಶ್ನೆ ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಇದರಲ್ಲಿ ಮಧ್ಯಸ್ಥಿಕೆ ವಹಿಸಬಹುದು; ಆದರೆ ನಿಮಗೆ ತಿಳಿದಿರುವಂತೆ ಪಾಕಿಸ್ತಾನದೊಂದಿಗೆ ನನ್ನ ಸಂಬಂಧ ಚೆನ್ನಾಗಿದೆ. ಅಲ್ಲಿ ಒಬ್ಬ ಉತ್ತಮ ಪ್ರಧಾನಿ ಇದ್ದಾರೆ. ಅವರ ಸೇನಾ ಮುಖ್ಯಸ್ಥರೂ ಒಳ್ಳೆಯವರಾಗಿದ್ದಾರೆ. ನಾನು ಅವರಿಬ್ಬರನ್ನೂ ಗೌರವಿಸುತ್ತೇನೆ. ಪಾಕಿಸ್ತಾನ ಒಳ್ಳೆಯ ಕೆಲಸ ಮಾಡುತ್ತಿದೆ. ತಾಲಿಬಾನ್ ದಾಳಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಪಾಕಿಸ್ತಾನಕ್ಕಿದೆ’ ಎಂದು ಟ್ರಂಪ್ ತಿಳಿಸಿದರು.
‘ತಾಲಿಬಾನ್ ದಾಳಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಪಾಕಿಸ್ತಾನಕ್ಕಿದೆಯಂತೆ!’ – ಅಮೆರಿಕ
ಅಮೆರಿಕದ ಕಾರ್ಯದರ್ಶಿ ಆಲಿಸನ್ ಹೂಕರ್ ಅವರು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಆಮ್ನಾ ಬಲೋಚ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ಅಮೆರಿಕದ ಬೆಂಬಲವನ್ನು ಸ್ಪಷ್ಟಪಡಿಸಿದರು. ಅವರು ಮಾತನಾಡಿ, ನಾವು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತಾಲಿಬಾನ್ ದಾಳಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪಾಕಿಸ್ತಾನಕ್ಕಿರುವ ಹಕ್ಕನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು. ಅಫಘಾನಿಸ್ತಾನ ಮತ್ತು ಪಾಕಿಸ್ತಾನ ದೇಶಗಳಲ್ಲಿ ವಾಸಿಸುತ್ತಿರುವ ಅಮೆರಿಕನ್ ನಾಗರಿಕರಿಗಾಗಿ ಮಾರ್ಗಸೂಚಿಗಳನ್ನು ಪ್ರಸಾರ ಮಾಡಲಾಗುವುದು. ಈ ಎರಡು ದೇಶಗಳಲ್ಲಿರುವ ಅಮೆರಿಕನ್ ನಾಗರಿಕರಿಗೆ ಜಾಗರೂಕರಾಗಿರುವಂತೆ ಸಲಹೆ ನೀಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation