‘ಲಿವ್ ಇನ್ ರಿಲೇಶನ್‌ಶಿಪ್’ನಲ್ಲಿದ್ದ ಮಹಿಳೆಯ ಮಗುವಿನ ಮೇಲೆಯೇ ಅತ್ಯಾಚಾರ !
(ಲಿವ್ ಇನ್ ರಿಲೇಶನ್‌ಶಿಪ್ ಎಂದರೆ ಮದುವೆಯಾಗದೆ ಪುರುಷ ಮತ್ತು ಸ್ತ್ರೀ ಜೊತೆಯಲ್ಲಿ ವಾಸಿಸುವುದು)
(ಡಿಎಂಕೆ ಎಂದರೆ ದ್ರಾವಿಡ ಮುನ್ನೇತ್ರ ಕಳಗಂ – ದ್ರಾವಿಡ ಪ್ರಗತಿ ಸಂಘ)

ಚೆನ್ನೈ (ತಮಿಳುನಾಡು) – ಕೃಷ್ಣಗಿರಿ ಜಿಲ್ಲೆಯಲ್ಲಿ ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಗುವಿನ ಸಾವಿಗೆ ಕಾರಣವಾದ ಆಡಳಿತಾರೂಢ ಡಿಎಂಕೆ ಪಕ್ಷದ ಯುವ ಘಟಕಕ್ಕೆ ಸೇರಿದ ಸ್ಥಳೀಯ ಪದಾಧಿಕಾರಿ ಎಂ. ಪೆರಿಯಾನಾಯಕಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ‘ಪೋಕ್ಸೊ’ ಕಾಯ್ದೆ ಮತ್ತು ಕೊಲೆಗೆ ಸಂಬಂಧಿಸಿದ ಗಂಭೀರ ಕಲಮುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯಿಂದ ರಾಜ್ಯಾದ್ಯಂತ ಆಕ್ರೋಶದ ಅಲೆ ಎದ್ದಿದ್ದು, ವಿರೋಧ ಪಕ್ಷಗಳು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಸರಕಾರವನ್ನು ಟೀಕಿಸಿವೆ.
ಪೆರಿಯಾನಾಯಕಂ ಒಬ್ಬ ಮಹಿಳೆಯೊಂದಿಗೆ ‘ಲಿವ್ ಇನ್ ರಿಲೇಶನ್‌ಶಿಪ್’ನಲ್ಲಿದ್ದನು. ಆ ಮಹಿಳೆಗೆ ಈ ಮೊದಲೇ ಒಂದು ಹೆಣ್ಣು ಮಗು ಇತ್ತು. ಕೆಲವು ದಿನಗಳ ಹಿಂದೆ ಮಗುವಿನ ಆರೋಗ್ಯ ಹಠಾತ್ತನೆ ಬಿಗಡಾಯಿಸಿದ್ದರಿಂದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯಕೀಯ ಅಧಿಕಾರಿಗಳು ಮಗು ಮೃತಪಟ್ಟಿದೆ ಎಂದು ಘೋಷಿಸಿದರು. ಮಗುವಿನ ಜೈವಿಕ ತಂದೆಗೆ ಸಂಶಯ ಬಂದ ಕಾರಣ ಅವರು ದೂರು ನೀಡಿದ್ದರು. ನಂತರ ಪೊಲೀಸರು ತನಿಖೆ ನಡೆಸಿ ಶವಪರೀಕ್ಷೆ ಮಾಡಿಸಿದಾಗ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಸಂಪಾದಕೀಯ ನಿಲುವುಇಂತಹ ಕಾಮಾಂಧನಿಗೆ ನಡುರಸ್ತೆಯಲ್ಲಿಯೇ ಗಲ್ಲು ಶಿಕ್ಷೆ ವಿಧಿಸಬೇಕು! |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !