|

ಸೂರತ್ (ಗುಜರಾತ್) – ಸೂರತ್ ಜಿಲ್ಲೆಯ ಹತೋಡಾ ಗ್ರಾಮದಲ್ಲಿ ಗೋಹತ್ಯೆ ನಡೆದಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ತನಿಖೆ ನಡೆಸಲು ತೆರಳಿದ್ದ ಪೊಲೀಸ್ ತಂಡ ಮತ್ತು ಗೋರಕ್ಷಕರ ಮೇಲೆ ಮುಸ್ಲಿಂ ಸಮುದಾಯದ ಕೆಲವರು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಗೋರಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಫೆಬ್ರವರಿ ೨೫ ರಂದು ನಡೆದ ಈ ಘಟನೆಯ ನಂತರ, ಪೊಲೀಸರು ಗ್ರಾಮದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ೨೨ ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರೇ ದೂರುದಾರರಾಗಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾಗ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಕೆಲವರು ವಾಗ್ವಾದಕ್ಕಿಳಿದಿದ್ದಾರೆ. ಈ ವಾಗ್ವಾದವು ವಿಕೋಪಕ್ಕೆ ತಿರುಗಿ ಪೊಲೀಸರು ಮತ್ತು ಗೋರಕ್ಷಕರ ಮೇಲೆ ಹಲ್ಲೆ ನಡೆದಿದೆ. ಈ ಸಂದರ್ಭದಲ್ಲಿ ಸುಮಾರು ೫೦ಕ್ಕೂ ಹೆಚ್ಚು ಜನರಿದ್ದ ಗುಂಪು ತಲ್ವಾರ್ ಹಾಗೂ ಕಬ್ಬಿಣದ ಪೈಪ್‌ಗಳಂತಹ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಸಂಪಾದಕೀಯ ನಿಲುವುಗುಜರಾತ್ನಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಬಿಜೆಪಿ ಸರ್ಕಾರವಿದ್ದರೂ ಗೋಹತ್ಯೆ ಮತ್ತು ಇಂತಹ ದಾಳಿಗಳು ಹೇಗೆ ನಡೆಯುತ್ತವೆ ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಮೂಡುತ್ತಿದೆ. |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”