ಶಿಕ್ಷಣ ಇಲಾಖೆಯಿಂದ ಶಿಕ್ಷಕನಿಗೆ ನೋಟಿಸ್

ಧಾರವಾಡ – ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯನ್ನು ಮೊದಲೇ ನೀಡುವುದಾಗಿ ನಂಬಿಸಿ, ಶಿಕ್ಷಕನೊಬ್ಬ ವಿದ್ಯಾರ್ಥಿಯಿಂದ 80 ಗ್ರಾಂ ಚಿನ್ನವನ್ನು ಕಿತ್ತುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಶ್ನೆಪತ್ರಿಕೆ ನೀಡುವ ಆಮಿಷವೊಡ್ಡಿ ವಿದ್ಯಾರ್ಥಿಗೆ ವಂಚಿಸಿದ ಶಿಕ್ಷಕನ ವಿರುದ್ಧ ಈಗ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಈ ವಂಚನೆಯಿಂದ ಬೇಸತ್ತ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. (ಇಂತಹ ಭ್ರಷ್ಟ ಶಿಕ್ಷಕರು ವಿದ್ಯಾರ್ಥಿಗಳಿಗೆ ನೈತಿಕತೆಯ ಸಂಸ್ಕಾರವನ್ನು ಹೇಗೆ ನೀಡಲು ಸಾಧ್ಯ? – ಸಂಪಾದಕರು)
1. ಧಾರವಾಡದ ಪ್ರತಿಷ್ಠಿತ ‘ಕೆ.ಇ. ಬೋರ್ಡ್’ ಅಡಿಯಲ್ಲಿ ಬರುವ ವಿದ್ಯಾರಣ್ಯ ಹೈಸ್ಕೂಲ್‌ನ ಶಿಕ್ಷಕ ರಾಜಶೇಖರ ವಡ್ತೇರ ಎಂಬುವವರು ಹತ್ತನೇ ತರಗತಿಯ ವಿದ್ಯಾರ್ಥಿ ಅಭಿಷೇಕ ಶಿವಾನಂದ ಕರ್ಕಿ ಎಂಬಾತನನ್ನು ತಮ್ಮ ಜಾಲಕ್ಕೆ ಬೀಳಿಸಿಕೊಂಡಿದ್ದರು. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮೊದಲೇ ಪ್ರಶ್ನೆಪತ್ರಿಕೆ ನೀಡುವ ಆಮಿಷವೊಡ್ಡಿ ಈ ಶಿಕ್ಷಕ ಹಣ ಮತ್ತು ಚಿನ್ನಕ್ಕೆ ಬೇಡಿಕೆಯಿಟ್ಟಿದ್ದರು.
2. ಶಿಕ್ಷಕನ ಮಾತನ್ನು ನಂಬಿದ ಅಭಿಷೇಕ, ತನ್ನ ಮನೆಯಲ್ಲಿದ್ದ ಸುಮಾರು 80 ಗ್ರಾಂ ಚಿನ್ನದ ಆಭರಣಗಳನ್ನು ಶಿಕ್ಷಕನಿಗೆ ನೀಡಿದ್ದನು.
3. ಪರೀಕ್ಷೆಯ ನಂತರ ವಿದ್ಯಾರ್ಥಿಯು ತನ್ನ ಚಿನ್ನವನ್ನು ಮರಳಿ ಕೇಳಿದಾಗ, ಶಿಕ್ಷಕ ರಾಜಶೇಖರ ವಡ್ತೇರ ಅದನ್ನು ನೀಡಲು ನಿರಾಕರಿಸಿದ್ದಲ್ಲದೆ, ‘ಪೂರಕ (ಸಪ್ಲಿಮೆಂಟರಿ) ಪರೀಕ್ಷೆಗೆ ಕುಳಿತುಕೊಳ್ಳಲು ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
4. ಮನೆಯವರ ಚಿನ್ನವನ್ನು ಕಳೆದುಕೊಂಡ ದುಃಖದಿಂದಾಗಿ ಅಭಿಷೇಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
5. ಈ ಗಂಭೀರ ಪ್ರಕರಣದ ಕುರಿತು ಸಂತ್ರಸ್ತ ವಿದ್ಯಾರ್ಥಿಯ ತಾಯಿ ಸರೋಜಿನಿ ಶಿವಾನಂದ ಕರ್ಕಿ ಅವರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
6. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ), ಕೆ.ಇ. ಶಿಕ್ಷಣ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ. ‘ಸಂಬಂಧಪಟ್ಟ ಶಿಕ್ಷಕನ ವಿರುದ್ಧ ತಕ್ಷಣವೇ ತನಿಖೆ ನಡೆಸಿ ಶಿಸ್ತುಕ್ರಮ ಕೈಗೊಳ್ಳಬೇಕು ಮತ್ತು ಕೂಡಲೇ ವರದಿ ಸಲ್ಲಿಸಬೇಕು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
7. ‘ಮಕ್ಕಳಿಗೆ ಸನ್ಮಾರ್ಗ ತೋರಬೇಕಾದ ಶಿಕ್ಷಕರೇ ಹೀಗೆ ಮಾಡಿದರೆ ಸಮಾಜ ಯಾರನ್ನು ನಂಬಬೇಕು?’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !