ಮಧುಬನಿ ವೈದ್ಯಕೀಯ ಕಾಲೇಜಿನ ಆದೇಶ

ಮಧುಬನಿ () – ಮಧುಬನಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯು ಪ್ರಾಂಶುಪಾಲರ ಸಹಿ ಮತ್ತು ಮೊಹರಿನೊಂದಿಗೆ ಅಧಿಕೃತ ಪತ್ರವೊಂದನ್ನು ಹೊರಡಿಸಿದೆ. ಅದರಲ್ಲಿ, “ರಂಜಾನ್ ತಿಂಗಳಿನಲ್ಲಿ ಯಾವುದೇ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಜೊತೆಯಾಗಿ ನಿಲ್ಲಬಾರದು. ಒಂದು ವೇಳೆ ಯಾರಾದರೂ ಜೊತೆಯಾಗಿ ಕಂಡುಬಂದರೆ, ಕಾಲೇಜು ಆಡಳಿತವು ತಕ್ಷಣವೇ ಅವರಿಗೆ ವಿವಾಹ ಮಾಡಿಸಲಿದೆ. ವಿವಾಹದ ನಂತರದ ಔತಣಕೂಟದ ಜವಾಬ್ದಾರಿಯೂ ಆಯಾ ದಂಪತಿಗಳದ್ದೇ ಆಗಿರುತ್ತದೆ” ಎಂದು ಎಚ್ಚರಿಕೆ ನೀಡಲಾಗಿದೆ. ಈ ಆದೇಶ ಹೊರಬಂದ ನಂತರ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ತಲ್ಲಣ ಉಂಟಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ, ಆಡಳಿತ ಮಂಡಳಿಯ ಮೌನ
ಈ ಸುತ್ತೋಲೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ಅನೇಕರು ಇದನ್ನು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಗದಾಪ್ರಹಾರ ಎಂದು ಕರೆದು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ; ಆದರೆ ಈ ವಿವಾದದ ಕುರಿತು ಕಾಲೇಜು ಆಡಳಿತ ಮಂಡಳಿಯು ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಮತ್ತು ಜಿಲ್ಲಾಡಳಿತದಿಂದಲೂ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಸಂಪಾದಕೀಯ ನಿಲುವುಇಂತಹ ಹಾಸ್ಯಾಸ್ಪದ ಆದೇಶವನ್ನು ಕಾಲೇಜು ಹೇಗೆ ತಾನೇ ನೀಡಲು ಸಾಧ್ಯ? ಇಂತಹ ಆದೇಶ ಹೊರಡಿಸಿದ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯಗತ್ಯ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!