ಖಮೇನಿ ನಿಧನಕ್ಕೆ ಅಮೆರಿಕದ ವಿರುದ್ಧ ‘ತೀವ್ರ ಖಂಡನೆ’ ವ್ಯಕ್ತ ಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ! – CM Siddaramaiah on Khamenei

ಶಿವಮೊಗ್ಗ – ‘ಒಂದೆಡೆ ಶಾಂತಿಯ ಮಂತ್ರ ಜಪಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದೆಡೆ ಯುದ್ಧ ಮಾಡುತ್ತಾರೆ. ಅವರ ಈ ಪರಸ್ಪರ ವಿರೋಧಿ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ’, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಗೆ ಹೋಗುವ ದಾರಿಯಲ್ಲಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಅತ್ಯಂತ ಖಂಡನೀಯ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಹೇಳಿದರು.

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ನಾವು ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿದ್ದೇವೆ. ಈ ಬಗ್ಗೆ ನಾವು ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿ ಹೇಳಿದರು.

ಸಂಪಾದಕೀಯ ನಿಲುವು

  • ಸಿದ್ದರಾಮಯ್ಯ ಅವರಿಗೆ ಖಮೇನಿ ನಿಧನದ ಬಗ್ಗೆ ನಿಜವಾಗಿಯೂ ದುಃಖವಾಗಿದೆಯೇ ಅಥವಾ ಇಲ್ಲವೇ ಎನ್ನುವುದು ಪ್ರಶ್ನೆಯಲ್ಲ. ಮುಸ್ಲಿಮರ ಓಲೈಕೆಗಾಗಿ ಅವರು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎನ್ನುವುದು ನಿಜ!
  • ನಾಳೆ ಭಾರತವೇ ಇರಾನ್ ಮೇಲೆ ಆಕ್ರಮಣ ಮಾಡಿತು ಎಂದು ಕಲ್ಪಿಸಿಕೊಳ್ಳಿ, ಆಗ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನೂ ವಿರೋಧಿಸುವರೇ?