ಮುಂದುವರೆದ ಅಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಯುದ್ಧ

ಕಾಬೂಲ್ (ಅಫ್ಘಾನಿಸ್ತಾನ) – ಒಂದು ಕಡೆ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ದಾಳಿ ನಡೆಸುತ್ತಿದ್ದರೆ, ಇನ್ನೊಂದೆಡೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಮುಂದುವರಿಯುತ್ತಿದೆ. ಅಫ್ಘಾನಿಸ್ತಾನದ ಸೈನ್ಯವು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮೇಲೆ ಡ್ರೋನ್ ಮೂಲಕ ದಾಳಿ ಮಾಡಿದೆ. ಪಾಕಿಸ್ತಾನದ ಸೈನ್ಯ ಮತ್ತು ವಾಯುಪಡೆಯ ನೆಲೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ತಾಲಿಬಾನ್ ಹೇಳಿದೆ.
ಅಫ್ಘಾನಿಸ್ತಾನದ ಸೈನ್ಯವು ಪಾಕಿಸ್ತಾನದ ರಾವಲ್ಪಿಂಡಿಯ ನೂರ್ ಖಾನ್ ವಾಯುಪಡೆಯ ನೆಲೆ, ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಪಾಕ್ ಸೈನ್ಯದ ೧೨ ನೇ ಡಿವಿಷನ್‌ನ ಮುಖ್ಯ ಕಾರ್ಯಾಲಯ ಮತ್ತು ಖೈಬರ್ ಪಖ್ತುನ್ಖ್ವಾದಲ್ಲಿರುವ ಖ್ವಾಜಾಯಿ ಕ್ಯಾಂಪ್ ಈ ಸೇನಾ ನೆಲೆಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯಲ್ಲಿ ಪಾಕಿಸ್ತಾನದ ೩೨ ಸೈನಿಕರು ಹತರಾಗಿದ್ದಾರೆಂದು ಅಫ್ಘಾನಿಸ್ತಾನ ಹೇಳಿದೆ. ವಿಶೇಷವೆಂದರೆ, ಇದೇ ನೂರ್ ಖಾನ್ ವಾಯುದಳ ನೆಲೆಗಳ ಮೇಲೆ ಭಾರತ ‘ಆಪರೇಷನ್ ಸಿಂದೂರ್’ ನ ಸಮಯದಲ್ಲಿ ದಾಳಿ ನಡೆಸಿ ಧ್ವಂಸಗೊಳಿಸಿತ್ತು.
*ನಮ್ಮ ಮೇಲೆ ದಾಳಿ ಮಾಡಿದರೆ ನಾವು ತಕ್ಕ ಪ್ರತ್ಯುತ್ತರ ನೀಡುತ್ತೇವೆ! – ಅಫ್ಘಾನಿಸ್ತಾನ
ಅಫ್ಘಾನಿಸ್ತಾನವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುತ್ತಾ, ಪಾಕಿಸ್ತಾನವು ನಮ್ಮ ವಾಯುಗಡಿಯ ನಿಯಮಗಳನ್ನು ಉಲ್ಲಂಘಿಸಿದರೆ, ನಾವು ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಪಾಕಿಸ್ತಾನವು ಕಾಬೂಲ್ ಹತ್ತಿರವಿರುವ ಬಗ್ರಾಮ್ ವಾಯುನೆಲೆ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ನಾವು ಇಂದು ನಡೆಸಿರುವ ಡ್ರೋನ್ ದಾಳಿಯು ಅದಕ್ಕೆ ನೀಡಿದ ಪ್ರತ್ಯುತ್ತರವಾಗಿದೆ ಎಂದು ಉತ್ತರಿಸಿದೆ.
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
‘ನೌಕಾ ಮರುಬಳಕೆ’ ವಲಯದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ! : Ship Recycling
ಸಂಯುಕ್ತ ಅರಬ್ ಅಮೀರತ್ (UAE) ಭಾರತದಿಂದ ‘ಬ್ರಹ್ಮೋಸ್’ ಕ್ಷಿಪಣಿ ಖರೀದಿಸಲು ಮಾತುಕತೆ ನಡೆಸುತ್ತಿದೆ! : India UAE BrahMos Deal
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ ಇಡೀ ಇರಾನ್ ಅನ್ನು ನಾಶಪಡಿಸಲಾಗುವುದು! : Donald Trump