ಮಂಗಳೂರಿನ ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ !

ಮಂಗಳೂರು – ‘ಇಲ್ಲಿನ ರಾಯಿಕಟ್ಟೆ ಪ್ರದೇಶದಲ್ಲಿನ ಫಾಲ್ಗುಣಿ ನದಿಗೆ ಸಮೀಪದ ಕೈಗಾರಿಕೆಗಳಿಂದ ವಿಷಕಾರಿ ರಾಸಾಯನಿಕ ಮತ್ತು ತ್ಯಾಜ್ಯಗಳನ್ನು ಅನಧಿಕೃತವಾಗಿ ಬಿಡಲಾಗುತ್ತಿದೆ. ಇದರಿಂದಾಗಿ ನದಿ ನೀರು ತೀವ್ರವಾಗಿ ಮಲಿನಗೊಂಡಿದ್ದು, ಸ್ಥಳೀಯರಲ್ಲಿ ಜ್ವರ, ಹೊಟ್ಟೆ ಸಂಬಂಧಿತ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಇದು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ತಕ್ಷಣದ ಕ್ರಮಕೈಗೊಳ್ಳಬೇಕೆಂದು’ ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ವತಿಯಿಂದ ಜಿಲ್ಲಾಧಿಕಾರಿಗಳಾದ ಶ್ರೀ. ರಾಜು ಕೆ ಇವರಿಗೆ ಫೆಬ್ರವರಿ ೧೯ ರಂದು ಮನವಿ ಸಲ್ಲಿಸಲಾಗಿದೆ.
ಈ ವೇಳೆ ಸುರಾಜ್ಯ ಅಭಿಯಾನದ ಸಂಯೋಜಕರಾದ ಶ್ರೀ. ಪ್ರಶಾಂತ ಕಾಂಚನ್, ಉದ್ಯಮಿಗಳಾದ ಎಂ. ಜಿ. ಶೆಟ್ಟಿ, ಭಾಸ್ಕರ್ ಕೋಲಂಡ್, ಅಮರನಾಥ ಶೆಟ್ಟಿ, ರಾಯಿಕಟ್ಟೆ ನಿವಾಸಿಗಳಾದ ತುಳಸಿದಾಸ ಕುಳೂರು, ನ್ಯಾಯವಾದಿ ಸುಷ್ಮಾ, ನ್ಯಾಯವಾದಿ ಈಶ್ವರ ಕೋಠಾರಿ, ಜಲಜಾಕ್ಷಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಶ್ರೀ. ದಿನಕರ ಪೂಜಾರಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”