ಖಮೇನಿ ಹತನಾದ ಸುದ್ದಿಯನ್ನು ಪ್ರಸಾರ ಮಾಡಿದ್ದಕ್ಕಾಗಿ ಜಿಹಾದಿಗಳಿಂದ ದಾಳಿ

ಬೆಂಗಳೂರು– ರಾಜ್ಯದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಇಸ್ಲಾಮಿಕ್ ಕಟ್ಟರವಾದಿಗಳು ಒಣ ಹಣ್ಣುಗಳ (ಡ್ರೈ ಫ್ರೂಟ್ಸ್) ವ್ಯಾಪಾರ ಮಾಡುವ ಚಂದ್ರಶೇಖರ ಎಂಬುವವರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಇರಾನಿನ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅವರು ಅಮೇರಿಕಾ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಹತರಾಗಿದ್ದಾರೆ ಎಂಬ ಸುದ್ದಿಯನ್ನು ಚಂದ್ರಶೇಖರ ಅವರು ತಮ್ಮ ‘ಇನ್ ಸ್ಟಾಗ್ರಾಮ್’ ಖಾತೆಯ ಮೂಲಕ ಹಂಚಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಇಸ್ಲಾಮಿಕ್ ಮೂಲಭೂತವಾದಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ನಂತರ ಪರಿಸರದಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
Gangavathi (Karnataka): Hindu businessman brutally attacked by Jihadis for sharing Instagram status on Ali Khamenei’s death
The reality is widely known, yet instead of accepting it, radicals chose violence against a Hindu who shared the news.
This clearly shows that such… https://t.co/8qPIlT46vF pic.twitter.com/OsEasHZWdv
— Sanatan Prabhat (@SanatanPrabhat) March 4, 2026
೧. ಚಂದ್ರಶೇಖರ ಅವರು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅವರು ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ೫ ರಿಂದ ೬ ಮಂದಿ ಇಸ್ಲಾಮಿಕ್ ಕಟ್ಟರವಾದಿಗಳು ಅಲ್ಲಿಗೆ ಬಂದರು. ಅವರು ಚಂದ್ರಶೇಖರ ಅವರನ್ನು ಸುತ್ತುವರಿದು ಇನ್ ಸ್ಟಾಗ್ರಾಮ್ ನಲ್ಲಿ ಸುದ್ದಿ ಹಂಚಿಕೊಂಡಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದರು.
೨. ‘ದಾಳಿಕೋರರು ಕೇವಲ ನನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ನನ್ನ ಮನೆಗೆ ನುಗ್ಗಿ ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಚಂದ್ರಶೇಖರ ತಿಳಿಸಿದ್ದಾರೆ.
೩. ಘಟನೆಯ ನಂತರ ಚಂದ್ರಶೇಖರ ಅವರು ರಾತ್ರಿ ಗಂಗಾವತಿ ಟೌನ್ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
೪. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಂಗಡಿಯ ಸಮೀಪವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ದಾಳಿಕೋರರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಸ್ಥಳೀಯ ನಾಗರಿಕರ ಹೇಳಿಕೆಯಂತೆ, ಅಂತರಾಷ್ಟ್ರೀಯ ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ನಡೆದ ಈ ಹಿಂಸಾತ್ಮಕ ಘಟನೆಯು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಘಾತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಪಾದಕೀಯ ನಿಲುವುಖಮೇನಿ ಹತನಾಗಿರುವುದು ಜಗಜ್ಜಾಹೀರಾದ ಸತ್ಯವಾಗಿದ್ದರೂ, ಅದನ್ನು ಪ್ರಸಾರ ಮಾಡಿದ ಹಿಂದೂವಿನ ಮೇಲೆ ಜಿಹಾದಿಗಳು ಆಕ್ರಮಣ ಮಾಡುತ್ತಾರೆಂದರೆ, ಅವರಿಗೆ ಹಿಂದೂಗಳ ಮೇಲೆ ದಾಳಿ ಮಾಡಲು ಕೇವಲ ನೆಪ ಬೇಕು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಇಂತಹವರನ್ನು ಮಟ್ಟಹಾಕಲು ಪ್ರಭಾವಿ ಹಿಂದೂ ಸಂಘಟನೆ ಅತ್ಯಗತ್ಯವಾಗಿವೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!