ಮಾನವ ಹಕ್ಕು ಆಯೋಗದಿಂದ ವಿವರಣೆ ಕೇಳಿಕೆ

ಭೋಪಾಲ್ (ಮಧ್ಯಪ್ರದೇಶ) – ಇಲ್ಲಿನ ‘ಏಮ್ಸ್’ನಲ್ಲಿ (ಏಮ್ಸ್ ಎಂದರೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಅಂದರೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಿಂದೂ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ‘ಏಮ್ಸ್’ನ ವಿಭಾಗೀಯ ಮುಖ್ಯಸ್ಥ ಡಾ. ಪರ್ವೇಜ್ ಅವರು ನೀಡುತ್ತಿದ್ದ ನಿರಂತರ ಮಾನಸಿಕ ಕಿರುಕುಳ ಮತ್ತು ಅವಮಾನದಿಂದ ಬೇಸತ್ತ ಡಾ. ಸೃಷ್ಟಿ ಅವರು, ಅರಿವಳಿಕೆ ಮದ್ದನ್ನು ಅತಿಯಾಗಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಗಂಭೀರ ಪ್ರಕರಣವನ್ನು ಗಮನಕ್ಕೆ ತೆಗೆದುಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಭೋಪಾಲ್ ಪೊಲೀಸ್, ‘ಏಮ್ಸ್’ ಆಡಳಿತ ಮಂಡಳಿ ಮತ್ತು ಆರೋಗ್ಯ ಸಚಿವಾಲಯಕ್ಕೆ ನೋಟಿಸ್ ಕಳುಹಿಸಿ ವಿವರವಾದ ವರದಿಯನ್ನು ಕೇಳಿದೆ.
೧. ಆತ್ಮಹತ್ಯೆಗೂ ಮುನ್ನ ಡಾ. ಸೃಷ್ಟಿ ಅವರು ಡಾ. ಪರ್ವೇಜ್ ವಿರುದ್ಧ ಆಸ್ಪತ್ರೆ ಆಡಳಿತ ಮಂಡಳಿಗೆ ೩ ಬಾರಿ ದೂರು ನೀಡಿದ್ದರು; ಆದರೆ ಮಂಡಳಿಯು ಆರೋಪಿ ವೈದ್ಯನ ಮೇಲೆ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಹತ್ತಿಕ್ಕಲು ಪ್ರಯತ್ನಿಸಿದೆ ಎಂದು ಆರೋಪಿಸಲಾಗಿದೆ. (ಹೀಗಾಗಿ ಈಗ ಡಾ. ಪರ್ವೇಜ್ ಅವರೊಂದಿಗೆ ಮೂಕಸಮ್ಮತಿ ನೀಡಿದ ‘ಏಮ್ಸ್’ ಆಡಳಿತ ಮಂಡಳಿಯ ಮೇಲೆಯೂ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
೨. ಡಾ. ಪರ್ವೇಜ್ ಅವರ ಕಿರುಕುಳ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಮಹಿಳಾ ವೈದ್ಯೆ ಮಾನಸಿಕವಾಗಿ ಕುಸಿದು ಇಂತಹ ತೀವ್ರ ನಿರ್ಧಾರ ಕೈಗೊಂಡಿದ್ದಾರೆ.
೩. ಆಯೋಗಕ್ಕೆ ಬಂದಿರುವ ದೂರಿನ ಪ್ರಕಾರ, ಡಾ. ಪರ್ವೇಜ್ ಅವರು ಡಾ. ಸೃಷ್ಟಿ ಅವರಿಗೆ ನಿರಂತರವಾಗಿ ಅವಮಾನ ಮಾಡುತ್ತಿದ್ದರು. ಈ ಪ್ರಕರಣದ ಗಂಭೀರತೆಯ ಬಗ್ಗೆ ಗಮನ ಸೆಳೆದಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಿಯಾಂಕ್ ಕಾನೂನಗೋ ಅವರು, “ವೈದ್ಯೆಯೊಬ್ಬರು ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳುವುದು ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಯನ್ನು ಎತ್ತುವ ಘಟನೆಯಾಗಿದೆ” ಎಂದು ಹೇಳಿದ್ದಾರೆ. ದೂರುಗಳಿದ್ದರೂ ಆರೋಪಿಯ ಮೇಲೆ ಕ್ರಮ ಏಕೆ ಕೈಗೊಳ್ಳಲಿಲ್ಲ ಎಂದು ಆಯೋಗವು ಭೋಪಾಲ್ ಪೊಲೀಸ್ ಮತ್ತು ‘ಏಮ್ಸ್’ ಆಡಳಿತವನ್ನು ಪ್ರಶ್ನಿಸಿದೆ.
೪. ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!