ಭಾರತ ಸರಕಾರದಿಂದ ಖಮೇನಿ ನಿಧನಕ್ಕೆ ಸಂತಾಪ ಸೂಚನೆ ! – Foreign Secretary Vikram Mistry on Iran

ಇರಾನ್ ರಾಯಭಾರ ಕಚೇರಿಯ ಶೋಕ ಪುಸ್ತಕದಲ್ಲಿ ವಿದೇಶಾಂಗ ಕಾರ್ಯದರ್ಶಿ ಸಹಿ

ನವ ದೆಹಲಿ – ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಸ್ರಿ ಅವರು ಇಲ್ಲಿನ ಇರಾನ್ ರಾಯಭಾರ ಕಚೇರಿಯಲ್ಲಿರುವ ಶೋಕ ಪುಸ್ತಕದಲ್ಲಿ ಸಹಿ ಮಾಡಿದರು. ಈ ಸಹಿಯನ್ನು ಅವರು ಭಾರತ ಸರಕಾರದ ಪರವಾಗಿ ಮಾಡಿದರು. ಇತ್ತೀಚಿನ ಘಟನೆಗೆ ಸಂಬಂಧಿಸಿದಂತೆ ಭಾರತವು ಇರಾನ್‌ನೊಂದಿಗೆ ಸಂವೇದನೆ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿತು. ಹಾಗೆಯೇ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಸಂತಾಪ ಸೂಚಿಸಿತು.

ಸಂಪಾದಕೀಯ ನಿಲುವು

ಭಾರತದಲ್ಲಿನ ಶಿಯಾ ಮುಸ್ಲಿಮರು ಮತ್ತು ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದು ಸರಕಾರ ಈ ನಿರ್ಧಾರ ಕೈಗೊಂಡಿದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ !