(ಯೂಟ್ಯೂಬರ್ ಎಂದರೆ ಸ್ವಂತ ಯೂಟ್ಯೂಬ್ ಚಾನೆಲ್ ಮೂಲಕ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ವ್ಯಕ್ತಿ)

ಒಂಟಾರಿಯೊ (ಕೆನಡಾ): ಇಲ್ಲಿ ಖಲಿಸ್ತಾನ್ ಚಳುವಳಿಯನ್ನು ವಿರೋಧಿಸುತ್ತಿದ್ದ ಪಂಜಾಬಿ ಮೂಲದ 45 ವರ್ಷದ ನ್ಯಾನ್ಸಿ ಗ್ರೆವಾಲ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಘಟನೆಯು ಮಾರ್ಚ್ 3ರ ರಾತ್ರಿ ನಡೆದಿದೆ. ನ್ಯಾನ್ಸಿ ಗ್ರೆವಾಲ್ ಅವರು ಯೂಟ್ಯೂಬರ್ ಆಗಿದ್ದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಸಕ್ರಿಯರಾಗಿದ್ದರು. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದಾಗ ನ್ಯಾನ್ಸಿ ಗ್ರೆವಾಲ್ ಅವರು ತೀವ್ರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರಿಗೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಪೊಲೀಸರು ಈ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Anti-Khalistan Punjabi YouTuber Nancy Grewal has been murdered in Canada.
This comes at a time when Canadian PM Mark Carney is visiting India to sign a key agreement and signalling cooperation with India against Khalistani extremism.
The timing raises serious questions.
Was… pic.twitter.com/4ax8bcu6YT
— Sanatan Prabhat (@SanatanPrabhat) March 5, 2026
ನ್ಯಾನ್ಸಿ ಗ್ರೆವಾಲ್ ಯಾರು ?
ನ್ಯಾನ್ಸಿ ಗ್ರೆವಾಲ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪಂಜಾಬ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಅವರು ಈ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಅಮೃತಪಾಲ್ ಸಿಂಗ್, ರಾಜಕೀಯ ನಾಯಕ ಬಿಕ್ರಮ್ ಸಿಂಗ್ ಮಜಿಠಿಯಾ ಮತ್ತು ‘ಡೇರಾ ಬಿಯಾಸ್’ ಸಂಪ್ರದಾಯಕ್ಕೆ ಸೇರಿದ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ಬಗ್ಗೆಯೂ ಬಹಿರಂಗವಾಗಿ ಮಾತನಾಡಿದ್ದರು. ಇದಲ್ಲದೆ, ಅವರು ಖಲಿಸ್ತಾನ್ ಬೆಂಬಲಿಗರನ್ನು ಟೀಕಿಸುತ್ತಿದ್ದರು ಮತ್ತು ಭಾರತ-ಕೆನಡಾ ನಡುವಿನ ಉದ್ವಿಗ್ನತೆಯಂತಹ ವಿಷಯಗಳ ಕುರಿತು ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಿದ್ದರು.
ಸಂಪಾದಕೀಯ ನಿಲುವುಕೆನಡಾ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ ಅವರು ಭಾರತಕ್ಕೆ ಭೇಟಿ ನೀಡಿ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ ಮತ್ತು ಒಂದು ರೀತಿಯಲ್ಲಿ ಖಲಿಸ್ತಾನ್ ವಿರುದ್ಧ ಭಾರತದೊಂದಿಗೆ ಸಹಕರಿಸುವ ನಿಲುವನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಕೆನಡಾದಲ್ಲಿರುವ ಖಲಿಸ್ತಾನಿಗಳು ಈ ಹತ್ಯೆ ಮಾಡಿರುವ ಸಾಧ್ಯತೆ ಹೆಚ್ಚಿದೆ ಎಂದು ಕಂಡುಬರುತ್ತದೆ ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation