ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2026-27ರ ಬಜೆಟ್ ಮಂಡನೆ

ಬೆಂಗಳೂರು, (ಮಾರ್ಚ್ 06) – ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚಳವಾಗಿದ್ದು, 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಂತಹ ಹೆಚ್ಚಿನ ಬಂಡವಾಳ ಆಕರ್ಷಣೆ, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.
1. ಶಿಕ್ಷಣ ಇಲಾಖೆ: 45,286 ಕೋಟಿ ರೂಪಾಯಿ2. ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ: 34,955 ಕೋಟಿ ರೂಪಾಯಿ3. ಇಂಧನ ಇಲಾಖೆ: 26,896 ಕೋಟಿ ರೂಪಾಯಿ4. ಗ್ರಾಮೀಣಾಭಿವೃದ್ಧಿ ಇಲಾಖೆ: 26,735 ಕೋಟಿ ರೂಪಾಯಿ5. ನೀರಾವರಿ ಇಲಾಖೆ: 22,181 ಕೋಟಿ ರೂಪಾಯಿ6. ನಗರಾಭಿವೃದ್ಧಿ, ವಸತಿ ಇಲಾಖೆ: 21,405 ಕೋಟಿ ರೂಪಾಯಿ7. ಒಳ ಆಡಳಿತ ಮತ್ತು ಸಾರಿಗೆ ಇಲಾಖೆ: 20,625 ಕೋಟಿ ರೂಪಾಯಿ8. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ: 17,473 ಕೋಟಿ ರೂಪಾಯಿ9. ಕಂದಾಯ ಇಲಾಖೆ: 17,201 ಕೋಟಿ ರೂಪಾಯಿ10. ಸಮಾಜ ಕಲ್ಯಾಣ ಇಲಾಖೆ: 16,955 ಕೋಟಿ ರೂಪಾಯಿ11. ಲೋಕೋಪಯೋಗಿ ಇಲಾಖೆ: 11,841 ಕೋಟಿ ರೂಪಾಯಿ12. ಆಹಾರ ಇಲಾಖೆ: 8,275 ಕೋಟಿ ರೂಪಾಯಿ13. ಕೃಷಿ, ತೋಟಗಾರಿಕೆ ಇಲಾಖೆ: 7,145 ಕೋಟಿ ರೂಪಾಯಿ14. ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ: 3,977 ಕೋಟಿ ರೂಪಾಯಿ15. ಇತರೆ: 1,49,857 ಕೋಟಿ ರೂಪಾಯಿ |
ಇದು ಓಲೈಕೆ ಬಜೆಟ್ ಭಾಜಪ ಟೀಕೆ
2026-27ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಖಾಲಿ ಪಾತ್ರೆ ಕೊಟ್ಟಿದ್ದಾರೆ ಎಂದು ಪ್ರತಿಪಕ್ಷ ಭಾಜಪ ಕಿಡಿಕಾರಿದೆ. ವಿಧಾನಸಭೆಯಲ್ಲಿ ಸಿದ್ದರಾಮಯ್ಯ 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದರೇ ಅತ್ತ ಪ್ರತಿಪಕ್ಷ ಭಾಜಪ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿತು. ಕಳೆದ 3 ವರ್ಷಗಳಲ್ಲಿ, ರಾಜ್ಯ ಸರ್ಕಾರವು 4.39 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದರು. ಮುಂದೆ ಅಧಿಕಾರಕ್ಕೆ ಬರುವ ಸರ್ಕಾರಗಳು ಬಡ್ಡಿಯನ್ನು ಪಾವತಿಸುವ ಸ್ಥಿತಿಯಲ್ಲಿರುವುದಿಲ್ಲ, ಅಸಲು ಮೊತ್ತವನ್ನು ಬಿಟ್ಟು ಹಣಕಾಸಿನ ಕೊರತೆಯು 97,000 ಕೋಟಿ ರೂ.ಗಳನ್ನು ತಲುಪಿದೆ ಎಂದರು. ಇದು ‘ಬ್ರದರ್ಸ್ ಬಜೆಟ್.. ಓಲೈಕೆ ರಾಜಕಾರಣವೇ ಕಾಂಗ್ರೆಸ್ ಪಕ್ಷದ ಪರಮ ಗುರಿ’ಯಾಗಿದೆ. ಅತಿಥಿ ಶಿಕ್ಷಕರಿಗೆ ಕಳೆದ 5 ತಿಂಗಳಿಂದ ಗೌರವ ಧನ ನೀಡದ ಈ ಭ್ರಷ್ಟ ಸರ್ಕಾರ, ಅಲ್ಪಸಂಖ್ಯಾತರ ಶಾಲೆಗಳನ್ನು KPS ಮಾದರಿಯಲ್ಲಿ ಉನ್ನತೀಕರಣಕ್ಕೆ 1000 ಕೋಟಿ ಕೊಟ್ಟಿದೆ ಎಂದು ಭಾಜಪ ಕಿಡಿಕಾರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ 2026 – 27ನೇ ಸಾಲಿನ ಬಜೆಟ್ ಅನ್ನ ಸ್ವಾಗತಿಸಿದ ರಾಮಚಂದ್ರಾಪುರ ಮಠ ಮತ್ತು ಹವ್ಯಕ ಮಹಾಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ 2026 – 27ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ. ಆಯವ್ಯಯದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವ ಘೋಷಣೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ರಾಮಚಂದ್ರಾಪುರ ಮಠ ಮತ್ತು ಹವ್ಯಕ ಮಹಾಸಭೆ ಅಭಿನಂದನೆಯನ್ನು ಸಲ್ಲಿಸಿದೆ.
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆಯ ಸುರಿಮಳೆ
ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ. ಸೇಲಂನ ಬೆನೆಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ 5 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
ಮುಜರಾಯಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿದ್ದೇನು?
ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನ ಮೀಸಲಿರಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯʼ ಮತ್ತು ʻಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯʼಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ತಂತ್ರಜ್ಞಾನ ಆಧಾರಿತ ಕೌನ್ಸೆಲಿಂಗ್ (Counselling) ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ.
ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿ ಇಲಾಖೆಗೆ ಸೇರಿದ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ (ಸೋಶಿಯಲ್ ಮೀಡಿಯಾ) ಬಳಕೆಯನ್ನು ನಿಷೇಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನಸಭೆಯಲ್ಲಿ ರಾಜ್ಯದ ವಾರ್ಷಿಕ ಆಯವ್ಯಯವನ್ನು (ಬಜೆಟ್) ಮಂಡಿಸುವ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ನಿರ್ಧಾರದಿಂದಾಗಿ ಇಂತಹ ಸಂಪೂರ್ಣ ನಿಷೇಧವನ್ನು ಜಾರಿಗೆ ತಂದ ಕರ್ನಾಟಕವು ದೇಶದ ಮೊದಲ ರಾಜ್ಯವಾಗಲಿದೆ. ಈ ಹಿಂದೆ ಆಂಧ್ರಪ್ರದೇಶ ಮತ್ತು ಗೋವಾ ಸರ್ಕಾರಗಳು ಸಹ ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೆ ನಿರ್ಬಂಧ ಹೇರುವ ಕುರಿತು ಚಿಂತನೆ ನಡೆಸುತ್ತಿರುವ ಬಗ್ಗೆ ಸೂಚನೆ ನೀಡಿದ್ದವು; ಆದರೆ ಕರ್ನಾಟಕವು ಈ ವಿಷಯದಲ್ಲಿ ಮೊದಲ ಬಾರಿಗೆ ಸ್ಪಷ್ಟ ಮತ್ತು ದೃಢವಾದ ನಿರ್ಧಾರವನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯು ವಿದ್ಯಾರ್ಥಿಗಳ ವರ್ತನೆ, ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಆಸ್ಟ್ರೇಲಿಯಾ ದೇಶವು ಕೂಡ ಇತ್ತೀಚೆಗಷ್ಟೇ ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸಿದೆ. |

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ