
ನವ ದೆಹಲಿ – “ಭಾರತವು ಇದನ್ನು ಅರ್ಥಮಾಡಿಕೊಳ್ಳುವುದು ಅಗತ್ಯವಾಗಿದೆ, ನಾವು ಅದೇ ತಪ್ಪನ್ನು ಮತ್ತೆ ಮಾಡುವುದಿಲ್ಲ. ನಾವು ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡಿದೆವು ಮತ್ತು ತಕ್ಷಣವೇ ನೀವು ಅನೇಕ ವ್ಯವಹಾರಗಳಲ್ಲಿ ನಮ್ಮನ್ನೇ ಹಿಂದಿಕ್ಕಲು ಪ್ರಾರಂಭಿಸಿದಿರಿ! ಇದು ಚೀನಾದ ವಿಷಯದಲ್ಲಿ ಸಂಭವಿಸಿತ್ತು. ಈಗ ಭಾರತದ ವಿಷಯದಲ್ಲಿ ಇದನ್ನು ತಪ್ಪಿಸಲಾಗುವುದು,” ಎಂದು ಅಮೆರಿಕದ ಡೆಪ್ಯುಟಿ ಸೆಕ್ರೆಟರಿ ಆಫ್ ಸ್ಟೇಟ್ ಕ್ರಿಸ್ಟೋಫರ್ ಲ್ಯಾಂಡೌ ಹೇಳಿದ್ದಾರೆ. ಅವರು ಇಲ್ಲಿ ನಡೆದ ‘ರೈಸಿನಾ ಡೈಲಾಗ್ ೨೦೨೬’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಬಗ್ಗೆ ಸಕಾರಾತ್ಮಕತೆ ವ್ಯಕ್ತಪಡಿಸಿದ ಲ್ಯಾಂಡೌ, ಈ ಒಪ್ಪಂದವು ಈಗ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು. ಈ ಒಪ್ಪಂದದಿಂದಾಗಿ ಉಭಯ ದೇಶಗಳ ಆರ್ಥಿಕ ಪಾಲುದಾರಿಕೆಗೆ ದೊಡ್ಡ ಉತ್ತೇಜನ ಸಿಗಲಿದೆ. ೨೧ನೇ ಶತಮಾನದಲ್ಲಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆಯ ದೇಶವಾಗಿ ಭಾರತದ ಉದಯ ನಿಶ್ಚಿತವಾಗಿದೆ. ಈ ಪಾಲುದಾರಿಕೆಯು ಎರಡೂ ದೇಶಗಳಿಗೂ ಲಾಭದಾಯಕವಾಗಿದೆ ಎಂದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation