ಬಳ್ಳಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಓರ್ವನನ್ನು ಹತ್ಯೆ ಮಾಡಿದ ಬಾಲಕನ ಬಂಧನ

ಬಳ್ಳಾರಿ – ಖಾಸಗಿ ಶಾಲೆಯ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕನು ವಸತಿ ನಿಲಯದಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಮತ್ತು ವಾರ್ಡನ್ (ಮುಖ್ಯ ನಿಗಾ ಘಟಕದ ವ್ಯವಸ್ಥಾಪಕ) ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಈ ಭೀಕರ ದಾಳಿಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಸತಿ ನಿಲಯದ ಮಾಲೀಕ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಈಗ ಶಾಲಾ ಆಡಳಿತ ಮಂಡಳಿಯ ಸದಸ್ಯರು ಮತ್ತು ಮಾಲೀಕರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಶಾಲೆಗೆ ಹೋಗುವ ಮಕ್ಕಳಲ್ಲಿ ಸಂಸ್ಕಾರದ ಕೊರತೆಯಿರುವುದು ಈ ಘಟನೆಯಿಂದ ಎದ್ದು ಕಾಣುತ್ತದೆ !