
ಗುವಾಹಟಿ (ಅಸ್ಸಾಂ) – ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಅವರು ಸಚಿವ ಸಂಪುಟ ಸಭೆಯ ನಂತರ ಬಾರ್ಪೇಟಾದಲ್ಲಿರುವ ‘ಫಕ್ರುದ್ದೀನ್ ಅಲಿ ಅಹ್ಮದ್ ವೈದ್ಯಕೀಯ ಕಾಲೇಜಿನ’ ಹೆಸರನ್ನು ಬದಲಾಯಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಆಸ್ಪತ್ರೆಯು ಇನ್ನು ಮುಂದೆ ‘ಬಾರ್ಪೇಟಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ ಎಂಬ ಹೆಸರಿನಿಂದ ಗುರುತಿಸಲ್ಪಡಲಿದೆ.
ಫಕ್ರುದ್ದೀನ್ ಅಲಿ ಅಹ್ಮದ್ ಅವರು ಭಾರತದ ರಾಷ್ಟ್ರಪತಿಯಾಗಿದ್ದರು ಮತ್ತು ಅಸ್ಸಾಂನಿಂದ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸರಮಾ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಅವರ ಬಗ್ಗೆ ಗೌರವ ವ್ಯಕ್ತಪಡಿಸಲು ಸರಕಾರವು ಮತ್ತೊಂದು ಪ್ರಮುಖ ಸಂಸ್ಥೆಗೆ ಅವರ ಹೆಸರನ್ನು ನಾಮಕರಣ ಮಾಡಲಿದೆ. ಸ್ಥಳೀಯ ಗುರುತು ಮತ್ತು ಆಡಳಿತಾತ್ಮಕ ಸ್ಪಷ್ಟತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯ ಹೆಸರನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !