
ಕಲಬುರಗಿ – ರಹಸ್ಯವಾಗಿ ನಡೆಯುತ್ತಿದ್ದ ಮತಾಂತರದ ಸಂಚನ್ನು ಹಿಂದೂ ಕಾರ್ಯಕರ್ತರು ಬಯಲಿಗೆಳೆದಿದ್ದಾರೆ. ಹಳ್ಳಿ ಹಳ್ಳಿಗೆ ತೆರಳಿ ‘ನಾವು ನಿಮಗಾಗಿ ಪ್ರಾರ್ಥಿಸುತ್ತೇವೆ, ನೀವು ಕೂಡ ಭಾನುವಾರ ನಮ್ಮೊಂದಿಗೆ ಪ್ರಾರ್ಥನೆಗೆ ಬನ್ನಿ’ ಎಂದು ಹೇಳುತ್ತಾ, ಏಸುಕ್ರಿಸ್ತನ ಬೋಧನೆಯ ಕರಪತ್ರಗಳನ್ನು ಹಂಚಿ ಮತಾಂತರಕ್ಕೆ ಸಂಚು ರೂಪಿಸುತ್ತಿದ್ದ ತಂಡವನ್ನು ಹಿಂದೂ ಕಾರ್ಯಕರ್ತರು ಹಿಡಿದಿದ್ದಾರೆ.
ಕಲಬುರಗಿ ನಗರದ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ಬಜರಂಗದಳ ಮತ್ತು ಇತರ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ತಂಡವನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರಪತ್ರ ಹಂಚುತ್ತಿದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಪ್ರತಿಭಟನೆ ನಡೆಸಲಾಯಿತು. “ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ಮತಾಂತರದ ಪ್ರಮಾಣ ಹೆಚ್ಚುತ್ತಿದೆ. ಕಾಯಿಲೆ ಗುಣಪಡಿಸುವ ನೆಪವೊಡ್ಡಿ ಮುಗ್ಧ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಸರಕಾರವು ತಕ್ಷಣವೇ ಇಂತಹ ಪ್ರವೃತ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ‘ನಿಮ್ಮ ಮನೆಯಲ್ಲಿ ಯಾರಾದರೂ ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದರೆ ಅಥವಾ ಸಂಕಷ್ಟದಲ್ಲಿದ್ದರೆ ನಮಗೆ ತಿಳಿಸಿ, ನಾವು ಅವರಿಗಾಗಿ ವಿಶೇಷ ಪ್ರಾರ್ಥನೆ ಮಾಡುತ್ತೇವೆ. ಇದರಿಂದ ನಿಮ್ಮ ಎಲ್ಲಾ ಸಂಕಷ್ಟಗಳು ದೂರವಾಗುತ್ತವೆ’ ಎಂದು ಗ್ರಾಮಸ್ಥರಿಗೆ ಆಮಿಷ ನೀಡುತ್ತಿದ್ದರು.
ಸಂಪಾದಕೀಯ ನಿಲುವುದೇಶದಲ್ಲಿ ಕಠಿಣ ಮತಾಂತರ ವಿರೋಧಿ ಕಾಯ್ದೆ ಇಲ್ಲದಿರುವುದೇ ಇದಕ್ಕೆ ಕಾರಣ! ಇದು ಇನ್ನು ಎಷ್ಟು ವರ್ಷಗಳ ಕಾಲ ಮುಂದುವರಿಯಲಿದೆ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೊಂದೇ ಪರ್ಯಾಯ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”