
ಬಾಗಲಕೋಟೆ – ಬಳ್ಳಾರಿಯ ಗುರುಕುಲದಲ್ಲಿ 9ನೇ ತರಗತಿಯ ವಿದ್ಯಾರ್ಥಿಯ ಕೊಲೆ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಯುವಕನನ್ನು ಕೊಲೆ ಮಾಡಿದ ಘಟನೆ ವರದಿಯಾಗಿದೆ. 16 ವರ್ಷದ ಅಪ್ರಾಪ್ತ ಬಾಲಕ ಮತ್ತು ಮೃತ ರಾಹುಲ್ ಬಾಹುಬಲಿ ಸಪ್ತಸಾಗರ (19 ವರ್ಷ) ಎಂಬುವವರ ನಡುವೆ ಹೋಳಿ ಹಬ್ಬದ ದಿನದಂದು ಜಗಳ ನಡೆದಿತ್ತು. “ಈ ಜಗಳದಲ್ಲಿ ನಾನೇ ರಾಹುಲ್‌ನಿಗೆ ಹೊಡೆದಿದ್ದೇನೆ” ಎಂದು ಈ ಬಾಲಕ ತನ್ನ ಸ್ನೇಹಿತರು ಮತ್ತು ಗೆಳತಿಯ ಮುಂದೆ ಬಡಾಯಿ ಕೊಚ್ಚಿಕೊಂಡಿದ್ದನು. ಬಾಲಕನ ಈ ವರ್ತನೆಯಿಂದ ರಾಹುಲ್ ತೀವ್ರ ಆಕ್ರೋಶಗೊಂಡಿದ್ದನು.
ಬಳಿಕ ರಾಹುಲ್ ಈ ಅಪ್ರಾಪ್ತ ಬಾಲಕನನ್ನು ‘ಮಾತನಾಡಬೇಕು’ ಎಂದು ಹೇಳಿ ದೇವಸ್ಥಾನದ ಬಳಿ ಕರೆಸಿದನು. ಚರ್ಚೆಯ ಸಮಯದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಸ್ಥಳದಲ್ಲಿ ಉಪಸ್ಥಿತರಿದ್ದ ಸ್ನೇಹಿತರು ಜಗಳ ಬಿಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಆ ಅಪ್ರಾಪ್ತ ಬಾಲಕನು ಚಾಕುವಿನಿಂದ ರಾಹುಲ್‌ನ ಕುತ್ತಿಗೆಗೆ ಇರಿದು ಕೊಲೆ ಮಾಡಿದನು. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಮಕ್ಕಳ ಮೇಲೆ ಬಾಲ್ಯದಲ್ಲಿಯೇ ಸರಿಯಾದ ಸಂಸ್ಕಾರ ಆಗದಿರುವುದೇ ಇಂತಹ ಘಟನೆಗಳಿಗೆ ಕಾರಣ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಸಾಧನೆ ಮತ್ತು ಸಂಸ್ಕಾರಗಳ ಅವಶ್ಯಕತೆಯಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!