
ನವದೆಹಲಿ – ಕಳೆದ 5 ದಿನಗಳಲ್ಲಿ ಎಲ್‌ಪಿಜಿ (LPG) ಉತ್ಪಾದನೆಯಲ್ಲಿ ಶೇಕಡಾ 28 ರಷ್ಟು ಏರಿಕೆಯಾಗಿದೆ ಮತ್ತು ಪ್ರಸ್ತುತ ಮುಂದಿನ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಭಾರತದ 33 ಕೋಟಿ ಕುಟುಂಬಗಳ, ಅದರಲ್ಲೂ ವಿಶೇಷವಾಗಿ ಬಡವರು ಮತ್ತು ವಂಚಿತರ ಅಡುಗೆಮನೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುವುದು ಮೋದಿ ಸರಕಾರದ ಮೊದಲ ಆದ್ಯತೆಯಾಗಿದೆ. ದೇಶೀಯ ಪೂರೈಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಲೋಕಸಭೆಯಲ್ಲಿ ತಿಳಿಸಿದರು. ದೇಶದಲ್ಲಿ ಸಿಎನ್‌ಜಿ (CNG) ಪೂರೈಕೆಯು 100 ಪ್ರತಿಶತದಷ್ಟು ಸಾಗುತ್ತಿದೆ. ಗ್ಯಾಸ್ ಸಿಲಿಂಡರ್ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ. ಕೇವಲ ಭೀತಿಯಿಂದಾಗಿ ಬೇಡಿಕೆ ಹೆಚ್ಚಾಗಿದೆಯೇ ಹೊರತು, ಪೂರೈಕೆ ಸರಪಳಿಯು ಸಂಪೂರ್ಣವಾಗಿ ಸುಗಮವಾಗಿದೆ. ಅಷ್ಟೇ ಅಲ್ಲದೆ, ಗ್ಯಾಸ್ ಕಾಳಸಂತೆಯನ್ನು ತಡೆಯಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮಾಹಿತಿಯನ್ನು ಮುಂದುವರಿಸುತ್ತಾ ಸಚಿವ ಪುರಿ ಅವರು, “ದೇಶದ ತೈಲ ಸಂಸ್ಕರಣಾಗಾರಗಳು ತಮ್ಮ ಪೂರ್ಣ ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತಿವೆ. ಹಲವು ಕಡೆಗಳಲ್ಲಿ ಈ ಸಾಮರ್ಥ್ಯವು ಶೇಕಡಾ 100 ಕ್ಕಿಂತಲೂ ಹೆಚ್ಚಾಗಿದೆ. ಆದ್ದರಿಂದ ಪೆಟ್ರೋಲ್, ಡೀಸೆಲ್ ಮತ್ತು ಸೀಮೆಎಣ್ಣೆಯಂತಹ ಇಂಧನಗಳ ಯಾವುದೇ ಕೊರತೆಯಿಲ್ಲ” ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!