ನಕಲಿ ವೈದ್ಯಕೀಯ ವೀಸಾ ಮೂಲಕ ಬಲ್ಗೇರಿಯಾಕ್ಕೆ ಪಲಾಯನ ಮಾಡುವ ಪ್ರಯತ್ನದಲ್ಲಿದ್ದರು
(ವೀಸಾ ಎಂದರೆ ಒಂದು ದೇಶಕ್ಕೆ ಪ್ರವೇಶಿಸಲು, ಒಂದು ದೇಶವನ್ನು ಬಿಟ್ಟು ಹೋಗಲು ಅಥವಾ ಒಂದು ದೇಶದ ಮೂಲಕ ಪ್ರಯಾಣಿಸಲು ಅನುಮತಿ ನೀಡುವ ಅಧಿಕೃತ ದಾಖಲೆ)

ನವ ದೆಹಲಿ – ದೆಹಲಿಯ ಪೀರಾಗಢಿ ಪ್ರದೇಶದಿಂದ ೧೦ ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಲಾಗಿದೆ. ಇವರೆಲ್ಲರೂ ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದರು ಮತ್ತು ನಕಲಿ ದಾಖಲೆಗಳ ಸಹಾಯದಿಂದ ಬಲ್ಗೇರಿಯಾದ ವೈದ್ಯಕೀಯ ವೀಸಾ ಪಡೆಯಲು ಪ್ರಯತ್ನಿಸುತ್ತಿದ್ದರು. ಪೊಲೀಸ್ ತಂಡವು ದಾಳಿ ನಡೆಸಿದಾಗ ಆರೋಪಿಗಳು ಪಲಾಯನ ಮಾಡಲು ಯತ್ನಿಸಿದರು; ಆದರೆ ಜಾಗೃತ ಪೊಲೀಸರು ಅವರನ್ನು ನಾಲ್ಕೂ ದಿಕ್ಕುಗಳಿಂದ ಸುತ್ತುವರಿದು ಬಂಧಿಸಿದರು. ವಿಚಾರಣೆಯ ವೇಳೆ ಬಂಧಿತರಿಗೆ ಯೋಗ್ಯ ಗುರುತಿನ ಚೀಟಿ ಅಥವಾ ಭಾರತದಲ್ಲಿ ವಾಸಿಸಲು ಅಗತ್ಯವಿರುವ ದಾಖಲೆಗಳನ್ನು ತೋರಿಸಲು ಸಾಧ್ಯವಾಗಲಿಲ್ಲ. ಅವರ ಪಾಸ್ ಪೋರ್ಟ್ ಮತ್ತು ವೀಸಾ ಅವಧಿ ಮುಗಿದಿರುವುದು ಪತ್ತೆಯಾಗಿದೆ.
ಪ್ರಸ್ತುತ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಯು ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಇವರನ್ನು ಮರಳಿ ಬಾಂಗ್ಲಾದೇಶಕ್ಕೆ ಕಳುಹಿಸುವ ಕೆಲಸವನ್ನು ಪ್ರಾರಂಭಿಸಿದೆ.
ಸಂಪಾದಕೀಯ ನಿಲುವುಭಾರತದಲ್ಲಿ ವೀಸಾ ಪಡೆದು ವಾಸಿಸುವ ವಿದೇಶಿ ಪ್ರಜೆಗಳ ವೀಸಾ ಅವಧಿ ಮುಗಿದ ನಂತರ ಅವರು ಮರಳಿ ಹೋಗುತ್ತಾರೆಯೇ, ಎಂಬುದನ್ನು ಖಚಿತಪಡಿಸಿಕೊಳ್ಳುವ ವ್ಯವಸ್ಥೆ ಇಲ್ಲವೇ? ಇಂತಹ ಎಷ್ಟು ವಿದೇಶಿ ನಾಗರಿಕರು ಭಾರತದಲ್ಲಿ ವಾಸಿಸುತ್ತಿರಬಹುದು ಎಂಬುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಭಾರತದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಕೋಟಿಗಟ್ಟಲೆ ಇರುವಾಗಲೂ ಕೂಡ ಈ ಬಗ್ಗೆ ನಿರ್ಲಕ್ಷ್ಯವಿರುವುದು ಲಜ್ಜಾಸ್ಪದ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!