ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶದ ಅಲೆ!

ಆಂಧ್ರ ಪ್ರದೇಶ – ರಾಜ್ಯದಲ್ಲಿ ಗೋವು ಕಳ್ಳಸಾಗಾಣಿಕೆ ವಿರುದ್ಧ ಕಠಿಣ ಕಾನೂನು ಜಾರಿಯಲ್ಲಿದ್ದರೂ, ‘ರಕ್ಷಕರೇ ಭಕ್ಷಕರಾಗುತ್ತಿದ್ದಾರೆ’ ಎಂಬ ಸಂಶಯವೊಂದು ಗೋವು ಕಳ್ಳಸಾಗಾಣಿಕೆಗೆ ಸಂಬಂಧಿಸಿದ ವಿಡಿಯೋದಿಂದಾಗಿ ಮೂಡಿದೆ. ಈ ವಿಡಿಯೋದಲ್ಲಿ ಪೊಲೀಸರು ಹಣ ಪಡೆದು ಹಸುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಟ್ರಕ್ ಅನ್ನು ಬಿಟ್ಟು ಕಳುಹಿಸುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. (ಪೊಲೀಸರಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ತರಬೇತಿ ನೀಡುವಾಗ ನೈತಿಕತೆಯನ್ನು ಕಲಿಸಿಲ್ಲ, ಅದರ ಪರಿಣಾಮವಿದು! – ಸಂಪಾದಕರು)
View this post on Instagram
ಈ ವಿಡಿಯೋದಲ್ಲಿ, ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸ್ ತಪಾಸಣೆಗಾಗಿ ನಿಲ್ಲಿಸಲಾಗಿತ್ತು. ಆದರೆ, ತಪಾಸಣೆ ನಡೆಸಿ ಕ್ರಮ ಕೈಗೊಳ್ಳುವ ಬದಲು, ಪೊಲೀಸರು ಟ್ರಕ್ನಲ್ಲಿದ್ದ ಗೋವು ಕಳ್ಳಸಾಗಾಣಿಕೆದಾರರಿಂದ ಹಣ ಪಡೆದು ಟ್ರಕ್ ಮುಂದೆ ಹೋಗಲು ಅನುಮತಿ ನೀಡಿದ್ದಾರೆ. ಜನರ ಕಣ್ಣು ತಪ್ಪಿಸಿ ಪೊಲೀಸರು ಲಂಚ ಪಡೆಯುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ‘ಕೇವಲ ಲಂಚ ನೀಡಿ, ಆಮೇಲೆ ಏನನ್ನಾದರೂ ಸಾಗಿಸಬಹುದು’ ಎಂಬಂತಾಗಿದೆ ಪೊಲೀಸರ ವರ್ತನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರತಿಕ್ರಿಯಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಭ್ರಷ್ಟ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಸಂಪಾದಕೀಯ ನಿಲುವುಸರಕಾರವು ಇಂತಹ ಪೊಲೀಸರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !