
ಅಲಿಗಢ (ಉತ್ತರ ಪ್ರದೇಶ) – ಇಲ್ಲಿನ ಸಮೀರ್, ಜುಬೇರ್ ಮತ್ತು ಶಾಹಿದ್ ಎಂಬ 3 ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿನಿಯೊಬ್ಬಳನ್ನು ಕಳೆದ ಕೆಲವು ದಿನಗಳಿಂದ ಹಿಂಬಾಲಿಸಿ ಪೀಡಿಸುತ್ತಿದ್ದರು. ಆರೋಪಿ ಮುಸ್ಲಿಂ ಯುವಕರು ಆಕೆಯ ಮೇಲೆ ಮತಾಂತರ ಮತ್ತು ನಿಕಾಹ್ (ಮದುವೆ) ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಜಲಾಲ್ಪುರದ ನಿವಾಸಿಯಾಗಿರುವ ಈ ವಿದ್ಯಾರ್ಥಿನಿಯು ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶಾಹಜಮಾಲ್ ಪ್ರದೇಶದ ಸಮೀರ್, ಜುಬೇರ್ ಮತ್ತು ಗೌಂಡಾ ಭಾಗದ ಸುಮಖರಾದ ಶಾಹಿದ್ ಎಂಬ ಯುವಕರು ಕಳೆದ ಹಲವು ದಿನಗಳಿಂದ ತನ್ನನ್ನು ಹಿಂಬಾಲಿಸುತ್ತಾ ದಾರಿಯಲ್ಲಿ ತೊಂದರೆ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಈ ಯುವಕರು ಆಕೆಯ ಮೇಲೆ ಧರ್ಮ ಬದಲಾಯಿಸಿ ಸಮೀರ್‌ನೊಂದಿಗೆ ನಿಕಾಹ್ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ವಿದ್ಯಾರ್ಥಿನಿಯು ಈ ವಿಷಯವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಳು. ಮಾರ್ಚ್ 12 ರಂದು ಈ ಮೂವರು ಯುವಕರು ಆಕೆಯನ್ನು ಹಿಂಬಾಲಿಸುತ್ತಾ ಕಾಲೇಜಿನವರೆಗೆ ಬಂದಾಗ, ಸಂತ್ರಸ್ತೆಯ ಚಿಕ್ಕಪ್ಪ ಮತ್ತು ಇತರರು ಸೇರಿ ಅವರನ್ನು ಹಿಡಿದಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಿರುಕುಳ ನೀಡುವುದು ಮತ್ತು ಮತಾಂತರಕ್ಕೆ ಒತ್ತಡ ಹೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಸದ್ಯ ಮೂವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಲವ್ ಜಿಹಾದಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನನ್ನು ಸರಕಾರ ಜಾರಿಗೆ ತರುವವರೆಗೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂಬುದನ್ನು ಸರಕಾರ ಗಮನಿಸುವುದು ಅಗತ್ಯವಾಗಿದೆ ! |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್