ಅಫ್ಘಾನಿಸ್ತಾನದ ಮೇಲಿನ ಪಾಕಿಸ್ತಾನದ ದಾಳಿಗೆ ಭಾರತದ ಖಂಡನೆ

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನವು ಮಾರ್ಚ್ 14 ಮತ್ತು 15 ರಂದು ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿದೆ. ಈ ದಾಳಿಯನ್ನು ಭಾರತ ಟೀಕಿಸಿದ ನಂತರ, ಪಾಕಿಸ್ತಾನ ಸರಕಾರವು “ಈ ವಿಷಯದಲ್ಲಿ ಭಾರತದ ನಿಲುವು ಅನಗತ್ಯ ಮತ್ತು ನಿರರ್ಥಕ” ಎಂದು ಹೇಳಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಭಾರತದ ಮೇಲೆ “ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಮತ್ತು ಅಂತರಾಷ್ಟ್ರೀಯ ಕಾನೂನುಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಆರೋಪಿಸಿದೆ. ಅಲ್ಲದೆ, ಈ ವಿಷಯದಲ್ಲಿ ಭಾರತದ ಭೂತಕಾಲವೇ ಕೆಟ್ಟದಾಗಿದೆ ಎಂದು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಅಫ್ಘಾನಿಸ್ತಾನದ ಮೇಲಿನ ದಾಳಿಯ ಕುರಿತು ಪಾಕಿಸ್ತಾನದ ನಿಲುವು
ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ನಡೆಸಿದ ದಾಳಿಗಳನ್ನು ಭಾರತ ಖಂಡಿಸಿದೆ. ಭಾರತದ ಈ ನಿಲುವಿನ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಾಹಿರ್ ಹುಸೇನ್ ಅಂದ್ರಾಬಿ, ಭಾರತದ ಹೇಳಿಕೆ ಸಂಪೂರ್ಣ ತಪ್ಪು ಎಂದು ಹೇಳಿದರು. “ಪಾಕಿಸ್ತಾನವು ಭಯೋತ್ಪಾದಕ ಗುಂಪುಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು ಹಾಗೆ ಮಾಡುವ ಹಕ್ಕು ಪಾಕಿಸ್ತಾನಕ್ಕಿದೆ” ಎಂದು ಅವರು ಹೇಳಿದರು.
“ಭಾರತವು ಹತಾಶೆಯಲ್ಲಿದೆಯಂತೆ!”
ಅಫ್ಘಾನಿಸ್ತಾನದ ನೆಲದಲ್ಲಿರುವ ಭಯೋತ್ಪಾದಕರು ಮತ್ತು ಅವರ ನೆಲೆಗಳ ವಿರುದ್ಧ ಪಾಕಿಸ್ತಾನದ ದಾಳಿಗಳು ಕಾನೂನುಬದ್ಧ ಮತ್ತು ನಿಖರವಾದವು ಎಂದು ತಾಹಿರ್ ಅಂದ್ರಾಬಿ ಹೇಳಿದರು. ಅಫ್ಘಾನಿಸ್ತಾನದ ಭೂಮಿಯಿಂದ ಕಾರ್ಯಾಚರಣೆ ಮಾಡುತ್ತಿರುವ ಭಯೋತ್ಪಾದಕ ಸಂಘಟನೆಗಳಿಗೆ ಭಾರತ ಬೆಂಬಲ ನೀಡುತ್ತಿದೆ. ಪಾಕಿಸ್ತಾನದ ಈ ಕ್ರಮದಿಂದಾಗಿ ಭಾರತದ ನಿಯಂತ್ರಣದಲ್ಲಿರುವ ಜಾಲವು ನಾಶವಾಗುತ್ತಿರುವುದರಿಂದ ಭಾರತವು ಹತಾಶೆಗೊಂಡಿದೆ ಎಂದು ಅವರು ಆರೋಪಿಸಿದರು.
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಮತ್ತು ಕಾಶ್ಮೀರ ವಿಷಯಗಳ ಪ್ರಸ್ತಾಪ
ಭಾರತವು ಸಿಂಧೂ ಒಪ್ಪಂದದ ಜವಾಬ್ದಾರಿಗಳನ್ನು ಮರೆತು ನೀರನ್ನು ಒತ್ತಡದ ಸಾಧನವಾಗಿ ಬಳಸುತ್ತಿದೆ ಎಂದು ಅಂದ್ರಾಬಿ ಹೇಳಿದರು. ಭಾರತದ ಈ ಕ್ರಮವು ಕೇವಲ ಅಫ್ಘಾನಿಸ್ತಾನಕ್ಕೆ ಮಾತ್ರವಲ್ಲದೆ ಇಡೀ ಪ್ರದೇಶದ ಶಾಂತಿಗೆ ಅಪಾಯಕಾರಿಯಾಗಿದೆ ಎಂದು ಅವರು ತಿಳಿಸಿದರು.
ಭಾರತದ ಪ್ರತಿಕ್ರಿಯೆ
ಪಾಕಿಸ್ತಾನದ ದಾಳಿಯ ಕುರಿತು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ರಂಜಾನ್ ಪವಿತ್ರ ಮಾಸದಲ್ಲಿ ಅಫ್ಘಾನಿಸ್ತಾನದ ಭೂಪ್ರದೇಶದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ” ಎಂದು ತಿಳಿಸಿದ್ದರು.
ಅಫ್ಘಾನಿಸ್ತಾನದ ಆರೋಪ
ಅಫ್ಘಾನಿಸ್ತಾನ ಸರಕಾರದ ವಕ್ತಾರ ಜಬಿವುಲ್ಲಾ ಮುಜಾಹಿದ್ ಮಾತನಾಡಿ, ಪಾಕಿಸ್ತಾನವು ನಂಗರ್ ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ಸಾಮಾನ್ಯ ನಾಗರಿಕರ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ. ಇದು ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation