ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶ ಪೊಲೀಸ್ ಉಪನಿರೀಕ್ಷಕ ನೇಮಕಾತಿ ಪರೀಕ್ಷೆಯಲ್ಲಿ ಕೇಳಲಾದ ಒಂದು ಬಹು ಆಯ್ಕೆಯ ಪ್ರಶ್ನೆಯು ವಿವಾದಕ್ಕೆ ಕಾರಣವಾಗಿದೆ. ‘ಪರಿಸ್ಥಿತಿಗೆ ಅನುಗುಣವಾಗಿ ಬದಲಾಗುವವರು ಯಾರು?’ ಎಂಬುದು ಆ ಪ್ರಶ್ನೆಯಾಗಿತ್ತು. ಇದಕ್ಕೆ ನೀಡಲಾದ ಆಯ್ಕೆಗಳಲ್ಲಿ ಒಂದು ಆಯ್ಕೆ ‘ಪಂಡಿತ’ ಎಂದಾಗಿತ್ತು. ಭಾಜಪ ಪ್ರದೇಶ ಸಚಿವ ಅಭಿಜಾತ ಮಿಶ್ರಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
Controversy in UP Police Recruitment! 🚨
A question in the UP Police SI exam asking "Who changes with the situation?" with "Pandit" as an option has sparked outrage.
Key Updates:
Govt Action: Deputy CM @brajeshpathakji assured action against those responsible.Strict Orders:… pic.twitter.com/poC49QX0Gu
— Sanatan Prabhat (@SanatanPrabhat) March 16, 2026
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಸಂಘರ್ಷ ಸಮಿತಿಯ ಮಾಧ್ಯಮ ಪ್ರಮುಖ ಪ್ರಶಾಂತ ಪಾಂಡೆ ಅವರು ‘ಪಂಡಿತ’ ಎಂಬ ಆಯ್ಕೆಯನ್ನು ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂ ಮಹಾಸಭೆಯು ಆರೋಪಿಸಿದ್ದು, ಈ ಬಗ್ಗೆ ದೂರು ದಾಖಲಿಸುವುದಾಗಿ ಘೋಷಿಸಿದೆ. ಇದಾದ ನಂತರ ಉಪಮುಖ್ಯಮಂತ್ರಿ ಬ್ರಿಜೇಶ ಪಾಠಕ್ ಅವರು ‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಪ್ರಸಾರ ಮಾಡಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಎಲ್ಲಾ ನೇಮಕಾತಿ ಮಂಡಳಿಗಳ ಅಧ್ಯಕ್ಷರಿಗೆ ನಿರ್ದೇಶನ ನೀಡಿದ್ದು, ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವಾಗ ಯಾವುದೇ ವ್ಯಕ್ತಿ, ಜಾತಿ, ಪಂಥ ಅಥವಾ ಸಮುದಾಯದ ಶ್ರದ್ಧೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಅವಹೇಳನಕಾರಿ ಅಂಶಗಳನ್ನು ಯಾವುದೇ ಪರಿಸ್ಥಿತಿಯಲ್ಲೂ ಸೇರಿಸಬಾರದು ಎಂದು ಸೂಚಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವವರಿಗೆ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುವಂತೆ ಆದೇಶಿಸಲಾಗಿದ್ದು, ಇದರಿಂದ ಸಂವೇದನಾಶೀಲತೆಯನ್ನು ಕಾಪಾಡಿಕೊಳ್ಳಲು ತಿಳಿಸಲಾಗಿದೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ