ಕ್ರಮ ಕೈಗೊಳ್ಳುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸಲು ಕೇಂದ್ರ ಸರಕಾರಕ್ಕೆ ವಿನಂತಿ!

ಮುಂಬಯಿ, ಮಾರ್ಚ್ 17 – ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಅಪ್ರಾಪ್ತ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಇರುವ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರಕಾರಕ್ಕೆ ವಿನಂತಿ ಮಾಡಲಾಗುವುದೆಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾರ್ಚ್ 17 ರಂದು ವಿಧಾನಸಭೆಯಲ್ಲಿ ತಿಳಿಸಿದರು. ನಾಗಪುರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಕಳ್ಳಸಾಗಾಣಿಕೆ ಬಗ್ಗೆ ಬಿಜೆಪಿ ಶಾಸಕ ಪ್ರವೀಣ್ ದಟ್ಕೆ ಅವರು ಕೇಳಿದ ಪ್ರಶ್ನೆಗೆ ದೇವೇಂದ್ರ ಫಡ್ನವೀಸ್ ಉತ್ತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಡ್ನವೀಸ್ ಅವರು, “2025-26 ನೇ ಸಾಲಿನಲ್ಲಿ ಮಾದಕ ವಸ್ತು ಕಳ್ಳಸಾಗಾಣಿಕೆಯ 10 ಪ್ರಕರಣಗಳಲ್ಲಿ ‘ಮಕೋಕಾ’ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. “ನಾಗಪುರದಲ್ಲಿ ಕಳೆದ 11 ತಿಂಗಳುಗಳಲ್ಲಿ ‘ಆಪರೇಷನ್ ಥಂಡರ್'(ಆಪರೇಷನ್ ಥಂಡರ್ ಎಂದರೆ ಅಪರಾಧಿಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸು ಕಾರ್ಯಾಚರಣೆ) ಅಡಿಯಲ್ಲಿ 907 ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಅದರಲ್ಲಿ 10 ಕೋಟಿ ರೂಪಾಯಿ ಮೌಲ್ಯದ 1,254 ಕಿಲೋ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ, “ಪ್ರಸ್ತುತ ಸಣ್ಣ-ಪುಟ್ಟ ಪ್ರದೇಶಗಳಲ್ಲೂ ಮಾದಕ ವಸ್ತು ತಯಾರಿಸುವ ಜಾಲಗಳು ನಡೆಯುತ್ತಿವೆ. ಇವುಗಳ ನಂಟು ಬೇರೆ ರಾಜ್ಯಗಳಿಗೂ ಹರಡಿದ್ದು, ಅಲ್ಲಿಯೂ ಹೋಗಿ ನಾವು ಕಾರ್ಯಾಚರಣೆ ನಡೆಸಿದ್ದೇವೆ. ಮಾದಕ ವಸ್ತು ಕಳ್ಳಸಾಗಾಣಿಕೆಯಲ್ಲಿ ಪೊಲೀಸರ ನೇರ ಭಾಗವಹಿಸುವಿಕೆ ಕಂಡುಬಂದಲ್ಲಿ, ಅವರನ್ನು ಸೇವೆಯಿಂದ ಕಾಯಂ ಆಗಿ ವಜಾಗೊಳಿಸಲಾಗುವುದು,” ಎಂದು ಫಡ್ನವೀಸ್ ಅವರು ಹೇಳಿದರು.
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ