
ನವದೆಹಲಿ: ಉಚ್ಚ ನ್ಯಾಯಾಲಯಗಳಲ್ಲಿ ವಿಚಾರಣೆ ಪೂರ್ಣಗೊಂಡ ನಂತರವೂ ತೀರ್ಪು ವಿಳಂಬವಾಗುತ್ತಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ. ಉಚ್ಚ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸರ್ವೋಚ್ಚ ನ್ಯಾಯಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ. ನ್ಯಾಯಾಂಗದ ಹೊಣೆಗಾರಿಕೆ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಈ ಪ್ರಕ್ರಿಯೆ ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ತಿಳಿಸಿದೆ.
೧. ತೀರ್ಪನ್ನು ಕಾಯ್ದಿರಿಸಿದ ನಂತರ, ಉಚ್ಚ ನ್ಯಾಯಾಲಯಗಳು ಗರಿಷ್ಠ ೩ ತಿಂಗಳೊಳಗೆ ಅದನ್ನು ಪ್ರಕಟಿಸಲು ಪ್ರಯತ್ನಿಸಬೇಕು.
೨. ಜಾಮೀನು, ನಿರೀಕ್ಷಣಾ ಜಾಮೀನು ಮತ್ತು ಕ್ರಿಮಿನಲ್ ಅರ್ಜಿಗಳ ತೀರ್ಪುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.
೩. ತೀರ್ಪು ನೀಡಲು ೩ ತಿಂಗಳು ಕಳೆದರೆ, ರಿಜಿಸ್ಟ್ರಾರ್ ಜನರಲ್ ಅವರು ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸಬೇಕು ಮತ್ತು ಪ್ರಕರಣವನ್ನು ಬೇರೆ ಪೀಠಕ್ಕೆ ಒಪ್ಪಿಸುವ ಬಗ್ಗೆ ಪರಿಗಣಿಸಬೇಕು.
೪. ತೀರ್ಪನ್ನು ಕಾಯ್ದಿರಿಸಿದ ನಂತರ, ಕ್ರಿಮಿನಲ್ ಪ್ರಕರಣಗಳಲ್ಲಿ ೫ ದಿನಗಳೊಳಗೆ ಮತ್ತು ಇತರ ಪ್ರಕರಣಗಳಲ್ಲಿ ೧ ತಿಂಗಳೊಳಗೆ ಅಗತ್ಯ ಸ್ಪಷ್ಟೀಕರಣಗಳನ್ನು ಪಡೆಯಬೇಕು.
೫. ಅನೇಕ ಬಾರಿ ಕೆಲಸದ ಒತ್ತಡದಿಂದಾಗಿ ನ್ಯಾಯಮೂರ್ತಿಗಳಿಗೆ ತೀರ್ಪು ನೀಡಲು ವಿಳಂಬವಾಗುತ್ತದೆ. ಇದನ್ನು ತಡೆಯಲು ಸ್ವಯಂ ಶಿಸ್ತು ಅತ್ಯಗತ್ಯ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!