
ಸಹರಾನ್‌ಪುರ (ಉತ್ತರ ಪ್ರದೇಶ) – ಇಲ್ಲಿ ಗೋಹತ್ಯೆ ನಡೆಸುತ್ತಿದ್ದ ಕುಖ್ಯಾತ ಅಪರಾಧಿ ಶೆಹಜಾದ್ ಪೊಲೀಸರೊಂದಿಗೆ ನಡೆದ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಶೆಹಜಾದ್ ಮೇಲೆ ೧ ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಈತನ ವಿರುದ್ಧ ೪೪ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಕಾರ್ಯಾಚರಣೆಯ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಮಾರ್ಚ್ ೧೮ ರಂದು ತಡರಾತ್ರಿ ಶೆಹಜಾದ್ ಗೋಹತ್ಯೆ ಮಾಡುವ ಉದ್ದೇಶದಿಂದ ಹೊರಬಂದಿದ್ದನು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಪೊಲೀಸರು ಅವನನ್ನು ನಾಲ್ಕೂ ಕಡೆಯಿಂದ ಸುತ್ತುವರಿದರು. ತಾನು ಸಿಕ್ಕಿಬಿದ್ದಿರುವುದನ್ನು ಗಮನಿಸಿದ ಶೆಹಜಾದ್ ಪೊಲೀಸರ ಮೇಲೆ ಗುಂಡಿನ ದಾಳಿ ಆರಂಭಿಸಿದನು. ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ಶೆಹಜಾದ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!