ಭಿವಂಡಿಯಲ್ಲಿ ಕಂದಾಯ ಇಲಾಖೆಯ ಕಾರ್ಯಾಚರಣೆ

ಭಿವಂಡಿ (ಠಾಣೆ ಜಿಲ್ಲೆ) – ಇಲ್ಲಿನ ಮರಳು ಬಂದರು ಪ್ರದೇಶದಲ್ಲಿ ನಡೆಯುತ್ತಿದ್ದ ಅನಧಿಕೃತ ಮರಳು ಗಣಿಗಾರಿಕೆ ವಿರುದ್ಧ ಠಾಣೆ ಕಂದಾಯ ಇಲಾಖೆಯು ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ಸುಮಾರು ೮೦ ರಿಂದ ೯೦ ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ಸುಟ್ಟು ಮತ್ತು ನೀರಿನಲ್ಲಿ ಮುಳುಗಿಸಿ ನಾಶಪಡಿಸಲಾಯಿತು. ಯಾವ ಸ್ಥಳದಲ್ಲಿ ಮರಳನ್ನು ಸಂಗ್ರಹಿಸಿಡಲಾಗಿತ್ತೋ, ಆ ಭೂಮಿಯು ಪಹಣಿ (RTC/Satbara) ದಾಖಲೆಗಳ ಪ್ರಕಾರ ‘ಮೀಸಲು ಅರಣ್ಯ ಪ್ರದೇಶ’ ಎಂದು ದಾಖಲಾಗಿತ್ತು. ಈ ಸಂದರ್ಭದಲ್ಲಿ ಮರಳು ಸಂಗ್ರಹಿಸಲು ಕಡಲತೀರದಲ್ಲಿ ನಿರ್ಮಿಸಲಾಗಿದ್ದ ೧೨ ದೊಡ್ಡ ಗುಂಡಿಗಳು (ಕುಂಡಗಳು) ಪತ್ತೆಯಾಗಿವೆ. ಕಂದಾಯ ಇಲಾಖೆಯು ೩ ಜೆಸಿಬಿಗಳ ಸಹಾಯದಿಂದ ಆ ಗುಂಡಿಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸಿತು. ಈ ಕ್ಷಿಪ್ರ ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಿವಂಡಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು. (ಕಂದಾಯ ಇಲಾಖೆಯು ಇಂತಹ ಕ್ಷಿಪ್ರ ಕಾರ್ಯಾಚರಣೆಗೆ ಮಾತ್ರ ಸೀಮಿತವಾಗದೆ, ಕಾಲಕಾಲಕ್ಕೆ ನಿಗಾ ವಹಿಸಿದರೆ ಮಾತ್ರ ಅನಧಿಕೃತ ಮರಳು ಗಣಿಗಾರಿಕೆಗೆ ತಡೆ ಬೀಳಲು ಸಾಧ್ಯ! – ಸಂಪಾದಕರು)
ಸಂಪಾದಕೀಯ ನಿಲುವುಅಕ್ರಮ ಗಣಿಗಾರಿಕೆ ಮತ್ತು ಪರಿಸರ ನಿಯಮಗಳ ಉಲ್ಲಂಘನೆಗಾಗಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!