ಭಾರತದಲ್ಲಿ ಅತಿ ಹೆಚ್ಚು ಕಾಲ ಸರಕಾರ ನಡೆಸಿದ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ! PM Modi Longest Serving Govt. Head

ನವದೆಹಲಿ – ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗ ದೇಶದಲ್ಲಿ ಅತಿ ಹೆಚ್ಚು ಕಾಲ ಸರಕಾರ ನಡೆಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿಯವರು ಈವರೆಗೆ ಒಟ್ಟು ೮,೯೩೧ ದಿನಗಳ ಕಾಲ ಸರಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ ಎರಡೂ ಅವಧಿಗಳು ಸೇರಿವೆ. ಈ ಹಿಂದೆ ಈ ದಾಖಲೆಯು ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರಿನಲ್ಲಿತ್ತು. ಚಾಮ್ಲಿಂಗ್ ಅವರು ಸಿಕ್ಕಿಂ ಮುಖ್ಯಮಂತ್ರಿಯಾಗಿ ೮,೯೩೦ ದಿನಗಳ ಕಾಲ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ೭ ಅಕ್ಟೋಬರ್ ೨೦೦೧ ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರು ದೀರ್ಘಕಾಲದವರೆಗೆ ಆ ಹುದ್ದೆಯಲ್ಲಿದ್ದರು. ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ೨೦೧೪ ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಅವರು ಪ್ರಧಾನ ಮಂತ್ರಿ ಪದವಿಯನ್ನು ಅಲಂಕರಿಸಿದರು.