
ಮುಂಬಯಿ – ನಮ್ಮ ದೇಶದಲ್ಲಿ ಇಂಧನದ ಸಾಕಷ್ಟು ಸಂಗ್ರಹವಿದೆ, ಆದ್ದರಿಂದ ಯಾವುದೇ ಸಂಕಟವಿಲ್ಲ. ದೇಶದಲ್ಲಿ ಸಂಚಾರ ಬಂದ್ (ಲಾಕ್‌ಡೌನ್) ಜಾರಿಯಾಗುವುದಿಲ್ಲ. ಇಂತಹ ವದಂತಿಗಳನ್ನು ಯಾರಾದರೂ ಹರಡುತ್ತಿದ್ದರೆ, ಅವರ ವಿರುದ್ಧ ಕಾನೂನುಬದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ. ‘ದೇಶದಲ್ಲಿ ಇಂಧನದ ಕೊರತೆಯಿದ್ದು, ಶೀಘ್ರದಲ್ಲೇ ಕೊರೊನಾ ಸಾಂಕ್ರಾಮಿಕದಂತೆ ಲಾಕ್‌ಡೌನ್ ಜಾರಿಯಾಗಲಿದೆ’ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಜನರಲ್ಲಿ ಆತಂಕ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಮೇಲಿನ ಹೇಳಿಕೆ ನೀಡಿದ್ದಾರೆ.
ಫಡ್ನವೀಸ್ ಅವರು ಮಾತನಾಡಿ, “ಲಾಕ್‌ಡೌನ್ ಜಾರಿಯಾಗುವುದಿಲ್ಲ ಎಂದು ಕೇಂದ್ರ ಸರಕಾರ ಘೋಷಿಸಿದೆ. ಸುಳ್ಳು ವಾಟ್ಸಾಪ್ ಸಂದೇಶಗಳನ್ನು ಹರಡುವುದು ಅಪರಾಧವಾಗಲಿದೆ. ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಹೀಗಾಗಿ ಕಚ್ಚಾ ತೈಲದ ಬೆಲೆ ಏರಿಕೆಯ ಹೊರೆಯನ್ನು ಈಗ ತೈಲ ಕಂಪನಿಗಳೇ ಭರಿಸಲಿವೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು (ಎಕ್ಸೈಸ್ ಡ್ಯೂಟಿ) 13 ರೂಪಾಯಿಯಿಂದ 3 ರೂಪಾಯಿಗೆ, ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಯಿಂದ ಶೂನ್ಯಕ್ಕೆ ಇಳಿಸಲಾಗಿದೆ,” ಎಂದು ಅವರು ತಿಳಿಸಿದರು.
| ಫಡ್ನವೀಸ್ ಅವರು ಮುಂದೆ ಮಾತನಾಡಿ,
“ನಮ್ಮ ನೆರೆಯ ದೇಶಗಳಲ್ಲಿ ಲಾಕ್‌ಡೌನ್‌ನಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಭಾರತದಲ್ಲಿ ಮಾತ್ರ ಅಡುಗೆ ಅನಿಲದ (ಗ್ಯಾಸ್) ಯಾವುದೇ ಕೊರತೆಯಿಲ್ಲ. ಆದ್ದರಿಂದ ವದಂತಿಗಳನ್ನು ನಂಬಿ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಸಾಲು ನಿಲ್ಲಬಾರದು. ನಮ್ಮಲ್ಲಿ ಒಂದು ತಿಂಗಳಿಗೆ ಸಾಕಾಗುವಷ್ಟು ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹವಿದೆ,” ಎಂದು ಮುಖ್ಯಮಂತ್ರಿ ಹೇಳಿದರು. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!