
ಹರದೋಯಿ (ಉತ್ತರಪ್ರದೇಶ) – ಇಲ್ಲಿನ ಸಮಾಜವಾದಿ ಪಕ್ಷದ ನಾಯಕ ಯದುನಂದನ ಲಾಲ್ ವರ್ಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ಶ್ರೀರಾಮ ಮತ್ತು ಕೌಸಲ್ಯ ಅವರನ್ನು ಅಶ್ಲೀಲ ಮತ್ತು ಅವಮಾನಕರ ಭಾಷೆಯನ್ನು ಬಳಸಿ ಅವಮಾನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ .ಇವರ ಈ ವಿವಾದಾತ್ಮಕ ಹೇಳಿಕೆಯ ವೀಡಿಯೊ ಹೊರಬಂದ ನಂತರ ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸಾಮಾನ್ಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ದೂರಿನ ಮೇರೆಗೆ ಪೊಲೀಸರು ಅವರನ್ನು ತಕ್ಷಣವೇ ಬಂಧಿಸಿದರು. ಈ ಹೇಳಿಕೆ ನಿಖರವಾಗಿ ಏನಾಗಿತ್ತು ಎಂಬುದು ತಿಳಿದುಬಂದಿಲ್ಲ.
೧. ಈ ಪ್ರಕರಣವು ಉಲ್ಬಣಗೊಳ್ಳುತ್ತಿರುವುದನ್ನು ಕಂಡು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶರಾಫತ್ ಅಲಿ ಅವರು ವರ್ಮಾ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಯದುನಂದನ ಲಾಲ್ ವರ್ಮಾ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
೨. ಧಾರ್ಮಿಕ ಸೌಹಾರ್ದತೆಯನ್ನು ಹಾಳುಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಆಡಳಿತವು ಸ್ಪಷ್ಟಪಡಿಸಿದೆ. ಪ್ರಸ್ತುತ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
#UPPolice
थाना हरपालपुर पुलिस द्वारा मु0अ0सं0 81/26 धारा 299/196 बीएनएस व 67 आईटी एक्ट से संबंधित वांछित अभियुक्त को गिरफ्तार करने के संबंध में-#HardoiPolice pic.twitter.com/SbssTRICUI— Hardoi Police (@hardoipolice) March 27, 2026
(ಈ ವಿಡಿಯೋ ಪ್ರಕಟಿಸುವುದರ ಉದ್ದೇಶ ಯಾವ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನೈಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು)
ಸಂಪಾದಕೀಯ ನಿಲುವುಸಮಾಜವಾದಿ ಪಕ್ಷದ ಹಿಂದುದ್ವೇಷ ! ಇಂತಹ ಪಕ್ಷಗಳ ಮಾನ್ಯತೆಯನ್ನೇ ರದ್ದುಪಡಿಸಬೇಕು ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”