|

ಶಿಮ್ಲಾ (ಹಿಮಾಚಲ ಪ್ರದೇಶ) – ಇಸ್ಲಾಂ ಮಹಮ್ಮದ್ ಶಾಹಿದುಲ್ ಎಂಬ ಹೆಸರಿನ ೩೦ ವರ್ಷದ ಯುವಕನು ಕಿನ್ನರನ ವೇಷ ಧರಿಸಿ ದೇವಸ್ಥಾನಕ್ಕೆ ಬರುವ ಭಕ್ತರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದಾನೆ ಎಂದು ಹಿಂದೂ ರಕ್ಷಾ ಮಂಚ್ ಆರೋಪಿಸಿದೆ. ಹಿಂದೂ ರಕ್ಷಾ ಮಂಚ್ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಈ ಯುವಕನು ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ಬಾಂಗ್ಲಾದೇಶಿ ಎಂದು ಗುರುತಿಸಿಕೊಳ್ಳುತ್ತಿದ್ದಾನೆ ಎಂದೂ ಮಂಚ್ ಆರೋಪಿಸಿದೆ.
೧. ಈ ಕುರಿತು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಶಾಹಿದುಲ್ ಶಿಮ್ಲಾದ ಎಪಿಜಿ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಶಿಕ್ಷಣ ಪಡೆಯುತ್ತಿದ್ದಾನೆ. ಪೊಲೀಸರು ಅವನ ದಾಖಲೆಗಳನ್ನೂ ಪರಿಶೀಲಿಸಿದ್ದಾರೆ.
೨. ಪೊಲೀಸ್ ತನಿಖೆಯ ಸಮಯದಲ್ಲಿ ಮಹಮ್ಮದ್ ಶಾಹಿದುಲ್ ತಾನು ತೃತೀಯಲಿಂಗಿ ಸಮುದಾಯಕ್ಕೆ ಸೇರಿದವನಾಗಿದ್ದು, ಕಾಳಿ ಮಾತೆಯ ಭಕ್ತನಾಗಿದ್ದೇನೆ ಎಂದು ಹೇಳಿದ್ದಾನೆ. ಆದ್ದರಿಂದ ತಾನು ಕಾಳಿಬಾಡಿ ದೇವಸ್ಥಾನ, ಜಾಖೂ ದೇವಸ್ಥಾನ ಮತ್ತು ಇತರ ಧಾರ್ಮಿಕ ಸ್ಥಳಗಳಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾನೆ.
೩. ಪೊಲೀಸರು ಇಲ್ಲಿಯವರೆಗೆ ಅವನ ವಿರುದ್ಧ ಬಲವಂತವಾಗಿ ಹಣ ವಸೂಲಿ ಮಾಡಿದ ಬಗ್ಗೆ ಯಾವುದೇ ದೃಢವಾದ ದೂರು ಬಂದಿಲ್ಲ ಎಂದು ಹೇಳಿದ್ದಾರೆ. (ದೂರು ಬರುವವರೆಗೆ ಪೊಲೀಸರು ಏನನ್ನೂ ಮಾಡುವುದಿಲ್ಲವೇ? – ಸಂಪಾದಕರು)
೪. ಈ ಪ್ರಕರಣದ ಪ್ರತಿಧ್ವನಿಯು ಹಿಮಾಚಲ ಪ್ರದೇಶದ ರಾಜಕೀಯದಲ್ಲೂ ಕೇಳಿಬಂದಿದೆ. ಹಿಮಾಚಲ ಪ್ರದೇಶದ ವಿರೋಧ ಪಕ್ಷದ ನಾಯಕ ಜಯರಾಮ್ ಠಾಕೂರ್ ಅವರು, ‘ಈ ಘಟನೆಯು ಗುಪ್ತಚರ ಇಲಾಖೆಯ ವೈಫಲ್ಯವಾಗಿರಬಹುದು. ಒಂದು ವೇಳೆ ಆರೋಪಗಳು ನಿಜವೆಂದು ಸಾಬೀತಾದರೆ, ಅದು ಭದ್ರತಾ ವ್ಯವಸ್ಥೆಯ ಮೇಲೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಲಿದೆ’, ಎಂದು ಹೇಳುತ್ತಾ ಈ ವಿಷಯವನ್ನು ವಿಧಾನಸಭೆಯಲ್ಲಿ ಮಂಡಿಸುವುದಾಗಿ ತಿಳಿಸಿದ್ದಾರೆ. ಶಿಮ್ಲಾ ಕ್ಷೇತ್ರದ ಶಾಸಕ ಹರೀಶ್ ಜನಾರಥಾ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.
ಸಂಪಾದಕೀಯ ನಿಲುವುಒಬ್ಬ ಮುಸಲ್ಮಾನನು ಹಿಂದೂಗಳ ದೇವಸ್ಥಾನಕ್ಕೆ ಹೋಗಿ ಹಿಂದೂ ಭಕ್ತರ ಮೇಲೆಯೇ ಹಣಕ್ಕಾಗಿ ದಬ್ಬಾಳಿಕೆ ಮಾಡುವವರೆಗೆ ಹಿಂದೂಗಳು ಏನು ಮಾಡುತ್ತಿದ್ದರು ? ಇದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”