ವಿನೋದ್ ಡಿಸೋಜಾ ಅವರಿಂದ ಪ್ರಧಾನಮಂತ್ರಿಗಳಿಗೆ ಪತ್ರ!

ಮುಂಬಯಿ – ಕೇಂದ್ರ ಸರಕಾರದ ಅಧೀನದಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಎರಡು ವಾರಗಳ ಹಿಂದೆ ತನ್ನ ಪಠ್ಯಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಲ್ಲಿ, ಎಂಟನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಿಂದ ಮರಾಠಾ ಸಾಮ್ರಾಜ್ಯದ ವಿಸ್ತರಣೆಯನ್ನು ತೋರಿಸುವ ನಕ್ಷೆಯನ್ನು ತೆಗೆದುಹಾಕಲಾಗಿದೆ. ಈ ನಕ್ಷೆಯು ಮರಾಠಾ ಕಾಲಘಟ್ಟದ ಭೌಗೋಳಿಕ ಗಡಿಗಳು ಮತ್ತು ಸ್ವರಾಜ್ಯದ ವ್ಯಾಪ್ತಿಯನ್ನು ತಿಳಿಸುತ್ತದೆ.
ಪ್ರಸ್ತುತ ಪಾಕಿಸ್ತಾನದಲ್ಲಿರುವ ಅಟಕ್ ವರೆಗೂ ಮರಾಠರು ಪ್ರದೇಶಗಳನ್ನು ಗೆದ್ದಿದ್ದರು. ಇದು ಕೇವಲ ಮಹಾರಾಷ್ಟ್ರದವರಿಗೆ ಮಾತ್ರವಲ್ಲದೆ ಇಡೀ ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಹೀಗಿರುವಾಗ, ಈ ನಕ್ಷೆಯನ್ನು ಪಠ್ಯಪುಸ್ತಕದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಮುಂಬಯಿನ ಜಾಗೃತ ನಾಗರಿಕರಾದ ವಿನೋದ್ ಡಿಸೋಜಾ ಅವರು ನೇರವಾಗಿ ಪ್ರಧಾನಮಂತ್ರಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಡಿಸೋಜಾ ಅವರು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರದಲ್ಲಿ,
“ಮರಾಠಾ ಸಾಮ್ರಾಜ್ಯದ ನಕ್ಷೆಯನ್ನು ತೆಗೆದುಹಾಕುವುದು ಕೇವಲ ಇತಿಹಾಸಕ್ಕೆ ಮಾಡುವ ದ್ರೋಹವಲ್ಲ, ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಮರಾಠಾ ಸಾಮ್ರಾಜ್ಯಕ್ಕೆ ಮಾಡಿದ ಅವಮಾನವಾಗಿದೆ. ಇದರಿಂದ ಮಹಾರಾಷ್ಟ್ರದ ಶಿವಾಜಿ ಅನುಯಾಯಿಗಳಿಗೆ ಮತ್ತು ಸಾರ್ವಜನಿಕರ ಭಾವನೆಗಳಿಗೆ ತೀವ್ರ ಧಕ್ಕೆಯಾಗಿದೆ. ಮರಾಠಾ ಸಾಮ್ರಾಜ್ಯದ ಶೌರ್ಯವು ದೇಶದ ಮೂಲೆ ಮೂಲೆಗೂ ತಲುಪಿರುವಾಗ, ಪಠ್ಯಪುಸ್ತಕದಿಂದ ಇಂತಹ ಪ್ರಮುಖ ಭಾಗವನ್ನು ಕೈಬಿಡುವುದು ಅನ್ಯಾಯವಾಗಿದೆ. ಈ ನಕ್ಷೆಯನ್ನು ತಕ್ಷಣವೇ ಮತ್ತೆ ಪಠ್ಯಪುಸ್ತಕದಲ್ಲಿ ಸೇರಿಸಬೇಕು.” ಎಂದು ಡಿಸೋಜಾ ಅವರು ಬರೆದಿದ್ದಾರೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ