
ಮುಂಬಯಿ – ಮಹಾರಾಷ್ಟ್ರದಲ್ಲಿ ನಕ್ಸಲೈಟ್ ಬಂಡುಕೋರರು ಇದುವರೆಗೆ ೮೫೩ ಜನರನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ೨೪೪ ಪೊಲೀಸರು ಮತ್ತು ೬೦೯ ನಾಗರಿಕರು ಸೇರಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಾಹಿತಿ ನೀಡಿದ್ದಾರೆ. ಮಾರ್ಚ್ ೩೦ ರಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಉಪಸ್ಥಿತಿಯಲ್ಲಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಅರ್ಧವಾರ್ಷಿಕ ಸಭೆ ನಡೆಯಿತು. ಸಭೆಯ ನಂತರ ಮುಖ್ಯಮಂತ್ರಿಯವರು ಮಾಧ್ಯಮಗಳಿಗೆ ಮೇಲಿನ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ನಕ್ಸಲ್ ವಿರುದ್ಧ ಹೋರಾಟ ನಡೆಸುತ್ತಿರುವ ‘ಸಿ-೬೦’ (ಮಹಾರಾಷ್ಟ್ರ ಪೊಲೀಸರ ಒಂದು ವಿಶೇಷ ಕಮಾಂಡೋ ತಂಡ) ಸೈನಿಕರ ಪಡೆಯಲ್ಲಿ ಕನಿಷ್ಠ ೩ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸೈನಿಕರನ್ನು ‘ಸಿ-೬೦’ ಪದಕ ನೀಡಿ ಗೌರವಿಸಲು ನಿರ್ಧರಿಸಲಾಯಿತು. ಈ ವೇಳೆ ಮಾತನಾಡಿದ ದೇವೇಂದ್ರ ಫಡ್ನವಿಸ್ ಅವರು, “ನಕ್ಸಲ್‌ಗಳ ವಿರುದ್ಧದ ಹೋರಾಟದಲ್ಲಿ ಮಹಾರಾಷ್ಟ್ರ ಪೊಲೀಸರು ನಿರ್ಣಾಯಕ ಯಶಸ್ಸನ್ನು ಸಾಧಿಸಿದ್ದಾರೆ. ರಾಜ್ಯದಲ್ಲಿ ಮಾವೋವಾದದ ಚಳುವಳಿಯು ಅತಿ ಕಡಿಮೆ ಮಟ್ಟಕ್ಕೆ ತಲುಪಿದೆ. ಮತ್ತೆ ಇದರ ಪುನರುಜ್ಜೀವನವನ್ನು ತಡೆಯುವುದು ಮುಂದಿರುವ ದೊಡ್ಡ ಸವಾಲಾಗಿದೆ” ಎಂದು ಹೇಳಿದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram