‘ಆಪರೇಶನ್ ಸಿಂದೂರ್’ ನಲ್ಲಿ ಗಾಯಗೊಂಡಿದ್ದ

ಲಾಹೋರ್ (ಪಾಕಿಸ್ತಾನ) – ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆ ‘ಜೈಶ್-ಎ-ಮೊಹಮ್ಮದ್’ನ ಮುಖ್ಯಸ್ಥ ಮಸೂದ್ ಅಜರ್‌ನ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ (ವಯಸ್ಸು ೬೨ ವರ್ಷ) ಸಂಶಯಾಸ್ಪದ ಪರಿಸ್ಥಿತಿಯಲ್ಲಿ ಮೃತಪಟ್ಟಿದ್ದಾನೆ. ಸಾವಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬಹಾವಲ್ಪುರದಲ್ಲಿ ಆತ ಮೃತಪಟ್ಟಿದ್ದಾನೆ. ಜೈಶ್-ಎ-ಮೊಹಮ್ಮದ್‌ನ ಅಧಿಕೃತ ಮಾಧ್ಯಮಗಳ ಮೂಲಕ ತಾಹಿರ್ ಸಾವನ್ನು ಖಚಿತಪಡಿಸಲಾಗಿದೆ; ಆದರೆ ಸಾವಿನ ಕಾರಣವನ್ನು ಘೋಷಿಸಲಾಗಿಲ್ಲ. ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ವೇಳೆ ಆತ ತೀವ್ರವಾಗಿ ಗಾಯಗೊಂಡಿದ್ದನು.
ತಾಹಿರ್ ಸಂಘಟನೆಯ ಮಿಲಿಟರಿ ವಿಭಾಗದ ಮುಖ್ಯಸ್ಥನಾಗಿದ್ದನು ಮತ್ತು ಕಳೆದ ೨ ದಶಕಗಳಿಗೂ ಹೆಚ್ಚು ಕಾಲ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದನು. ೨೦೦೧ ರ ನಂತರ ಅನೇಕ ತರಬೇತಿ ಶಿಬಿರಗಳನ್ನು ಸ್ಥಾಪಿಸುವಲ್ಲಿ ಮತ್ತು ನಡೆಸುವಲ್ಲಿ ಆತ ಪ್ರಮುಖ ಪಾತ್ರ ವಹಿಸಿದ್ದನು. ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ಪೂರೈಕೆ ವ್ಯವಸ್ಥೆಯ ಜವಾಬ್ದಾರಿಯೂ ಅವನ ಮೇಲಿತ್ತು. ಆದ್ದರಿಂದ ಆತನನ್ನು ಸಂಘಟನೆಯ ಪ್ರಮುಖ ಆಧಾರಸ್ತಂಭ (ಬೆನ್ನೆಲುಬು) ಎಂದು ಪರಿಗಣಿಸಲಾಗಿತ್ತು.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ