|

ಬೆಂಗಳೂರು – ಧರ್ಮದ ಎಲ್ಲಾ ಆದರ್ಶಗಳನ್ನು ಪಾಲಿಸುವ ‘ಮರ್ಯಾದಾ ಪುರುಷೋತ್ತಮ’ ಶ್ರೀರಾಮನು ಆದರ್ಶ ಪುತ್ರ, ಆದರ್ಶ ಸಹೋದರ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜನಾಗಿ ಇಡೀ ಮಾನವಕುಲಕ್ಕೆ ಮಾರ್ಗದರ್ಶಿಯಾಗಿದ್ದಾನೆ. ಶ್ರೀರಾಮನವಮಿಯ ದಿನದಂದು ಶ್ರೀರಾಮತತ್ತ್ವವು ಎಂದಿಗಿಂತಲೂ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಈ ಆಧ್ಯಾತ್ಮಿಕ ಲಾಭವನ್ನು ಸಮಾಜಕ್ಕೆ ತಲುಪಿಸುವ ದೃಷ್ಟಿಯಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಮಾರ್ಚ್ ೨೬ ರಂದು ಉಡುಪಿ, ಬೆಂಗಳೂರು, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಸಾಮೂಹಿಕವಾಗಿ ‘ಶ್ರೀರಾಮ ಜಯ ರಾಮ ಜಯ ಜಯ ರಾಮ’ ನಾಮವನ್ನು ಜಪಿಸಲಾಯಿತು.

ಈ ಶುಭ ದಿನದಂದು ‘ರಾಮರಾಜ್ಯ’ದ ಸ್ಥಾಪನೆಗಾಗಿ ಕಟಿಬದ್ಧರಾಗಲು ಪ್ರತಿಜ್ಞೆ ಮಾಡಲಾಯಿತು. ಈ ವೇಳೆ ಉಪಸ್ಥಿತ ಧರ್ಮಾಭಿಮಾನಿಗಳು ಸಂಘಟಿತರಾಗಿ, ತಮ್ಮ ಸಾಧನೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ರಾಮರಾಜ್ಯ ಸ್ಥಾಪನೆಯ ದೈವೀ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಿಶ್ಚಯಿಸಿದರು.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್