ಉತ್ತರ ಪ್ರದೇಶದ ೫೫೮ ಮದರಸಾಗಳ ಮೇಲೆ ಕ್ರಮ ಜರುಗಲಿದೆ! – UP Madrasa Mid Day Meal Scam

ಮದರಸಾಗಳು ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಧಿಯನ್ನು ಕಬಳಿಸಿವೆ!

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಯೋಗಿ ಸರಕಾರವು ಮದರಸಾಗಳಲ್ಲಿನ ಅಕ್ರಮಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ೫೫೮ ಮದರಸಾಗಳಲ್ಲಿ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಮದರಸಾಗಳು ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದ ಯೋಜನೆಯ ನಿಧಿಯನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿಯೂಟ ಪ್ರಾಧಿಕಾರದ ನಿರ್ದೇಶಕಿ ಮೋನಿಕಾ ರಾಣಿ ಅವರು ತನಿಖೆಗೆ ಆದೇಶಿಸಿದ್ದಾರೆ.

ಅಖಿಲ ಭಾರತ ಪಸಮಾಂದಾ ಸಮಾಜ ಮಂಚ್ ನೀಡಿದ ದೂರಿನ ನಂತರ ಈ ಪ್ರಕರಣವು ಬಯಲಾಗಿದೆ. ಮದರಸಾಗಳಲ್ಲಿ ದಾಖಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಗೆ ತೋರಿಸಲಾಗುತ್ತಿದೆ ಎಂದು ಈ ಮಂಚ್ ಸರಕಾರಕ್ಕೆ ತಿಳಿಸಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳು ಮತ್ತು ನಿಧಿ ತಲುಪುತ್ತಿಲ್ಲ. ಸರಕಾರಿ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ವೈಯಕ್ತಿಕ ಲಾಭಕ್ಕಾಗಿ ಬಳಸಲಾಗುತ್ತಿದೆ. ಈ ದೂರನ್ನು ಗಮನಕ್ಕೆ ತೆಗೆದುಕೊಂಡು ಸರಕಾರವು ತನಿಖೆಗೆ ಆದೇಶ ನೀಡಿದೆ. ಸರಕಾರಿ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ, ಹಾಗೆಯೇ ನಿಧಿಯ ಹಂಚಿಕೆ ಮತ್ತು ಪ್ರತ್ಯಕ್ಷವಾಗಿ ಮಧ್ಯಾಹ್ನದ ಬಿಸಿಯೂಟ ಸೇವಿಸುವ ವಿದ್ಯಾರ್ಥಿಗಳ ಸಂಖ್ಯೆಯ ಹೊಂದಾಣಿಕೆಯನ್ನು ಪರಿಶೀಲಿಸಲಾಗುತ್ತದೆ. ಯೋಗಿ ಸರಕಾರವು ಕಳೆದ ಕೆಲವು ಸಮಯದಿಂದ ಮದರಸಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಪಾರದರ್ಶಕತೆ ತರಲು ಪ್ರಯತ್ನಿಸುತ್ತಿದೆ. ಇದಕ್ಕೂ ಮೊದಲು ಅನಧಿಕೃತ ಮದರಸಾಗಳ ಸಮೀಕ್ಷೆಯನ್ನು ನಡೆಸಲಾಗಿತ್ತು.

ಸಂಪಾದಕೀಯ ನಿಲುವು

ಇಂತಹ ಮದರಸಾಗಳ ಮೇಲೆ ಸರಕಾರವು ತಕ್ಷಣವೇ ಏಕೆ ನಿಷೇಧ ಹೇರುತ್ತಿಲ್ಲ?