ತೆಲಂಗಾಣದಲ್ಲಿ ಹಿಂದೂಗಳ ಸಂಘಟಿತ ಪ್ರಯತ್ನದ ಫಲ!
ಭಾಗ್ಯನಗರ (ತೆಲಂಗಾಣ) – ಭಾರತ, ಬ್ರಾಹ್ಮಣರು, ಹಿಂದೂಗಳ ದೇವಸ್ಥಾನಗಳು ಹಾಗೂ ಹಿಂದೂ ರಾಷ್ಟ್ರದ ಬಗ್ಗೆ ಅತ್ಯಂತ ಅವಮಾನಕಾರಿ ಹೇಳಿಕೆಗಳನ್ನು ನೀಡುವ ಹಾಸ್ಯ ಕಲಾವಿದ ನಸೀಫ್ ಅಖ್ತರ್ ನ ಕಾರ್ಯಕ್ರಮವು ಇಲ್ಲಿ ಏಪ್ರಿಲ್ ೩ ರಂದು ನಡೆಯಬೇಕಿತ್ತು. ಇದರ ವಿರುದ್ಧ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಕಾರ್ಯಕರ್ತರು ಗಚ್ಚಿಬೌಲಿ ಪೊಲೀಸ್ ಠಾಣೆಯಲ್ಲಿ ಪೊಲೀಸ ಉಪಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.
ಹಾಸ್ಯದ ಹೆಸರಿನಲ್ಲಿ ಹಿಂದೂ ಧರ್ಮ ಮತ್ತು ಭಾರತ ದೇಶವನ್ನು ಅವಮಾನಿಸುವ ಈ ಕಾರ್ಯಕ್ರಮಕ್ಕೆ ಭಾಗ್ಯನಗರದಲ್ಲಿ ಅನುಮತಿ ನೀಡಬಾರದು ಎಂದು ಹಿಂದುತ್ವನಿಷ್ಠರು ಆಗ್ರಹಿಸಿದ್ದರು. ಈ ಹಿಂದೆ ಬೆಂಗಳೂರಿನಲ್ಲಿಯೂ ಆಯೋಜಿಸಲಾಗಿದ್ದ ಅಖ್ತರ್ ನ ಕಾರ್ಯಕ್ರಮಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ವಿರೋಧ ವ್ಯಕ್ತಪಡಿಸಿ ದೂರು ನೀಡಿದ್ದರಿಂದ ಆ ಕಾರ್ಯಕ್ರಮವೂ ರದ್ದಾಗಿತ್ತು.
ಭಾಗ್ಯನಗರದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ನಂತರ, ನಸೀಫ್ ಅಖ್ತರ್ ವಿಡಿಯೋ ಒಂದನ್ನು ಪ್ರಸಾರ ಮಾಡಿ ಭಾರತದಲ್ಲಿ ನಡೆಯಲಿರುವ ತನ್ನ ಮುಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ.
ಸಂಪಾದಕೀಯ ನಿಲುವು
|

ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು