
ಚಂಡೀಗಢ – ಇಲ್ಲಿನ ಸೆಕ್ಟರ್-೩೭ ರಲ್ಲಿರುವ ಭಾಜಪದ ಪ್ರಧಾನ ಕಚೇರಿಯ ಹೊರಗೆ ಏಪ್ರಿಲ್ ೧ ರಂದು ಸಂಭವಿಸಿದ ಸ್ಫೋಟದ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಈ ಸ್ಫೋಟದಲ್ಲಿ ಹಲವಾರು ವಾಹನಗಳ ಗಾಜುಗಳು ಪುಡಿಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಭಾಜಪ ಕಚೇರಿಯ ಸಮೀಪವಿರುವ ಮತ್ತೊಂದು ಕಚೇರಿಯ ಹೊರಗೆ ಇಬ್ಬರು ಶಂಕಿತರು ನಿಂತಿರುವುದು ಕಂಡುಬಂದಿದೆ. ಒಬ್ಬ ವ್ಯಕ್ತಿ ಗ್ರೆನೇಡ್ ಬಾಂಬ್ ಎಸೆಯುತ್ತಿರುವುದು ಕಂಡುಬಂದರೆ, ಮತ್ತೊಂದು ದೃಶ್ಯಾವಳಿಯಲ್ಲಿ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿರುವ ಇಬ್ಬರು ವ್ಯಕ್ತಿಗಳು ಕಂಡುಬಂದಿದ್ದಾರೆ, ಅವರನ್ನು ದಾಳಿಕೋರರು ಎಂದು ಹೇಳಲಾಗುತ್ತಿದೆ. ಖಲಿಸ್ತಾನಿ ಭಯೋತ್ಪಾದಕ ಸುಖಜಿಂದರ್ ಸಿಂಗ್ ಬಬ್ಬರ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಪ್ರಸಾರ ಮಾಡಿದ್ದಾನೆ. ಇದರಲ್ಲಿ ಖಲಿಸ್ತಾನಿ ಸಂಘಟನೆಯು ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ